ಬೆಳ್ತಂಗಡಿ: ವಿದ್ಯಾರ್ಥಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.18ರಂದು ರಾತ್ರಿ ನಡೆದಿದೆ.
ತಣ್ಣೀರುಪಂತ ನಿವಾಸಿ ಡೊಂಬಯ್ಯ ಗೌಡ ರವರ ಪುತ್ರ ಶ್ರವಣ್ (13ವ) ಮೃತ ವಿದ್ಯಾರ್ಥಿ. ಉಪ್ಪಿನಂಗಡಿಯ ಖಾಸಗಿ ಶಾಲೆಯ 7 ನೇ ತರಗತಿ ವಿದ್ಯಾರ್ಥಿಯಾಗಿದ್ದಾರೆ.
ಫೆ.18ರಂದು ರಾತ್ರಿ ಮನೆಯ ಕೋಣೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿರುವುದಾಗಿ ಶಂಕಿಸಲಾಗಿದೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.