ಬೆಳ್ತಂಗಡಿ: ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡ ದುರಸ್ತಿಯಲ್ಲಿದ್ದು ಹೊಸ ನ್ಯಾಯಾಲಯದ ಕಟ್ಟಡಕ್ಕೆ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ನಿಯೋಗ ಈ ದಿನ ಕರ್ನಾಟಕ ಸರಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ರವರನ್ನು ಮಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಹೈಕೋರ್ಟ್ ನ್ಯಾಯವಾದಿ, ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಹಿರಿಯ ವಕೀಲರ ಸಮಿತಿಯ ಅಧ್ಯಕ್ಷರಾದ ಅಲೋಶಿಯಸ್ ಎಸ್ ಲೋಬೊ, ವಕೀಲರ ಸಂಘದ ಉಪಾಧ್ಯಕ್ಷ ಅಶೋಕ್ ಕರಿಯನೆಲ, ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ, ಮತ್ತು ಹಿರಿಯ ವಕೀಲರಾದ ಬಿ ಎಂ ಭಟ್ ಮತ್ತು ಶ್ರೀನಿವಾಸ ಗೌಡ ಜೊತೆಗಿದ್ದರು.