ಬೆಳ್ತಂಗಡಿ: ಶಿಕ್ಷಣ ಫೌಂಡೇಶನ್ ಹಾಗೂ ಡೆಲ್ ಸಹಯೋಗದೊಂದಿಗೆ ನಡೆಯುತ್ತಿರುವ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದಡಿಯಲ್ಲಿ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಮತ್ತು ಮುಂಡಾಜೆ ಪಂಚಾಯತ್ ಅರಿವು ಕೇಂದ್ರಗಳಿಗೆ ಡಿಜಿಟಲ್ ಸಾಧನಗಳಾದ ಡೆಸ್ಕ್ಟಾಪ್ ಕಂಪ್ಯೂಟರ್ ಹಾಗೂ ಸ್ಮಾರ್ಟ್ ಮೊಬೈಲ್ ಅನ್ನು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರಾದ ಭವಾನಿಶಂಕರ ರವರ ಅಧ್ಯಕ್ಷತೆಯಲ್ಲಿ ಅರಿವು ಕೇಂದ್ರಗಳ ಮೇಲ್ವಿಚಾರಕರಿಗೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರು, ವ್ಯವಸ್ಥಾಪಕರು, ಅಭಿವೃದ್ಧಿ ಅಧಿಕಾರಿಗಳು ಹಾಗೂ ಶಿಕ್ಷಣ ಫೌಂಡೇಶನ್ ಜಿಲ್ಲಾ ವ್ಯವಸ್ಥಾಪಕ ಲವೀಶ್ ಉಪಸ್ಥಿತರಿದ್ದರು.