April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭ

ಕೊಕ್ಕಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಜ್ಞಾನ ವಿಕಾಸ ಕಾರ್ಯಕ್ರಮ ದಡಿಯಲ್ಲಿ ನಡೆಸಲಾದ ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭ ಕೊಕ್ಕಡ ಹಳ್ಳಿಂಗೇರಿ ಸಮುದಾಯ ಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿಯವರಾದ ಸುರೇಂದ್ರ ರವರು ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಮಾತೃಶ್ರೀ ಅಮ್ಮನವರು ಉಚಿತ ಟೈಲರಿಂಗ್ ತರಬೇತಿ ನೀಡಲು ಅವಕಾಶ ಕಲ್ಪಿಸಿದ್ದು 3 ತಿಂಗಳ ಕಾಲ ಕಲಿತ ವಿದ್ಯೆ ನಿಮ್ಮ ಮುಂದಿನ ಭವಿಷ್ಯಕ್ಕೆ ದಾರಿ ದೀಪವಾಗಲಿ ಎಂದು ಶುಭ ಹಾರೈಸಿದರು .

ಮುಖ್ಯ ಅತಿಥಿಯಾಗಿ ಆಗಮಿಸಿದ ಉಪ್ಪಾರಪಳಿಕೆ ಶಾಲೆಯ ಮುಖ್ಯೋಪಾಧ್ಯಾಯರಾದ ಸರಸ್ವತಿ ರವರು ಮಹಿಳೆಯರು ಮನೆಯಲ್ಲಿ ಕೂತು ಮನೆಯ ಕೆಲಸದೊಂದಿಗೆ ಸ್ವಂತ ಉದ್ಯೋಗವನ್ನು ಮಾಡಿ ಮನೆಯವರಿಗೆ ನೆರವಾಗಲು ಟೈಲರಿಂಗ್ ಉದ್ಯಮವು ಉತ್ತಮ ಅವಕಾಶವಾಗಿದ್ದು ಇಲ್ಲಿ ಪಡೆದ ತರಬೇತಿಯು ಇಲ್ಲಿಗೆ ಕೊನೆಗೊಳ್ಳದೆ ನಿರಂತರವಾಗಿ ಇದನ್ನು ಮುಂದುವರಿಸಿ ಸ್ವಉದ್ಯೋಗವನ್ನು ಮಾಡುವುದರೊಂದಿಗೆ ಉತ್ತಮ ಆದಾಯವನ್ನು ಗಳಿಸಿ ಎಂದರು. ತಾಲೂಕು ಜನ ಜಾಗೃತಿ ವೇದಿಕೆಯ ಸದಸ್ಯರಾದ ಉಸ್ಮಾನ್ ರವರು ಗ್ರಾಮ ಪಂಚಾಯಿತಿ ಸದಸ್ಯರಾದ ಪವಿತ್ರರವರು ಹೊಲಿಗೆ ತರಬೇತಿ ಕೇಂದ್ರದ ಶಿಕ್ಷಕರಾದ ಶ್ರೀಮತಿ ಸುಶೀಲರವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ತರಬೇತಿಯನ್ನ ಪಡೆದುಕೊಂಡ ಸಫ್ರಿನಾ, ರೀನಾ, ಅಶ್ವಿನಿ ಮತ್ತು ಲಲಿತಾರವರು ಅನಿಸಿಕೆಯನ್ನು ವ್ಯಕ್ತಪಡಿಸಿದರು. ಉಪ್ಪಾರ ಕಲಿಕೆ ಸೇವಾಪ್ರತಿನಿಧಿ ರೋಹಿಣಿ ಉಪಸ್ಥಿತರಿದ್ದರು ಜ್ಞಾನವಿಕಾಸ ಕಾರ್ಯಕ್ರಮದ ಸಮನ್ವಯದಿಕಾರಿಯವರಾದ ಮಧುರಾವಸಂತ್ ರವರು ನಿರೂಪಿಸಿದ ಕಾರ್ಯಕ್ರಮದಲ್ಲಿ ಸೇವಾಪ್ರತಿನಿಧಿ ಕುಸುಮರವರು ಸ್ವಾಗತಿಸಿ, ಮೇಲ್ವಿಚಾರಕರಾದ ಭಾಗೀರಥಿ ಧನ್ಯವಾದ ನೀಡಿದರು.

Related posts

ಉಚಿತ ಬಿದಿರು ಸಸಿಗಳ ವಿತರಣೆ; ಅರ್ಜಿ ಆಹ್ವಾನ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಯಕ್ರಮ

Suddi Udaya

ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಗೌರವಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಗಣಿತ ದಿನಾಚರಣೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya

ಕಡಿರುದ್ಯಾವರ ನಿವಾಸಿ ಕೃಷ್ಣ ನಾಯಕ್ ನಿಧನ

Suddi Udaya
error: Content is protected !!