26.1 C
ಪುತ್ತೂರು, ಬೆಳ್ತಂಗಡಿ
February 23, 2025
ತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾ.01 ರಿಂದ ಜಾತ್ರೋತ್ಸವ ಸಂಭ್ರಮ- ಮಡಿಲು ಸೇವೆ ವಿಶೇಷ: ಬಳಂಜ ಬಿಲ್ಲವ ಸಂಘದಲ್ಲಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ- ಸಮಾಲೋಚನೆ ಸಭೆ

ಬಳಂಜ: ದೇಯಿ ಬೈದೆದಿ ಕೋಟಿ- ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್ 1 ರಿಂದ ಮಾರ್ಚ್ 5ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವವನ್ನು ಯಶಸ್ವಿಗೊಳಿಸುವ ಬಗ್ಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಭಕ್ತಾಭಿಮಾನಿಗಳ ಸಮಾಲೋಚನ ಸಭೆಯು ಫೆ.15 ರಂದು ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ ವಹಿಸಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು .

ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೆೋತ್ಸವ ಸಮಿತಿಯ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕರಾದ ನಿತ್ಯಾನಂದ ನಾವರವರು ಶ್ರೀ ಕ್ಷೇತ್ರದಲ್ಲಿ ನಡೆಯುವ ಮಡಿಲು ಸೇವೆ ಹಾಗೂ ಉತ್ಸವದ ಮಾಹಿತಿಯನ್ನು ಸಭೆಗೆ ನೀಡಿ ತಾಲೂಕಿನ ಎಲ್ಲಾ ಭಕ್ತಾಭಿಮಾನಿಗಳನ್ನು ಜಾತ್ರೋತ್ಸವಕ್ಕೆ ಆಮಂತ್ರಿಸಿದರು.

ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಜಗದೀಶ್ ಪೂಜಾರಿ ಬಳ್ಳಿದಡ್ಡ,ಪ್ರಮುಖರಾದ ಸಂತೋಷ್ ಕುಮಾರ್ ಕಾಪಿನಡ್ಕ, ಪ್ರವೀಣ್ ಕುಮಾರ್ ಹೆಚ್‌ಎಸ್,ದೇಜಪ್ಪ ಪೂಜಾರಿ ಸುಧಾಮ,ಕೃಷ್ಣಪ್ಪ ಪೂಜಾರಿ ಬೊಂಟ್ರೋಟ್ಟು,ದಿನೇಶ್ ಪೂಜಾರಿ ಅಂತರ,ಯತೀಶ್ ವೈ.ಎಲ್,ಪ್ರವೀಣ್ ಡಿ ಕೋಟ್ಯಾನ್ ಉಪಸ್ಥಿತರಿದ್ದರು.

Related posts

ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರಿಗೆ ಪತ್ರ

Suddi Udaya

ಉಜಿರೆ: ಪಾಕತಜ್ಞ ಕೃಷ್ಣಮೂರ್ತಿ ರಾವ್ ನಿಧನ

Suddi Udaya

ಕಡಿರುದ್ಯಾವರ : ಪಾದಚಾರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಉಜಿರೆ ರಬ್ಬರ್ ಸೊಸೈಟಿ ವತಿಯಿಂದ ಆರ್ಥಿಕ ನೆರವು ಹಸ್ತಾಂತರ  

Suddi Udaya

ಬೆಂಗಳೂರು ಸೆಮಿಕಂಡಕ್ಟರ್ ವಿನ್ಯಾಸ ಸಂಸ್ಥೆ: 280 ಕೋಟಿ ರೂ. ಗೆ ಇನ್ಫೋಸಿಸ್ ಸ್ವಾಧೀನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಹಿಳಾ ಮತ್ತು ಜೂನಿಯರ್ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya
error: Content is protected !!