ಉರುವಾಲು : ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿನಗರ ಉರುವಾಲು ಪದವು ಇಲ್ಲಿಯ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆಯು ಬಹಳ ವಿಜೃಂಭಣೆಯಿಂದ ನಡೆಯಿತು.
ಬೆಳಗ್ಗೆ ಗಣಹೋಮ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸಾಯಂಕಾಲ ಆಹ್ವಾನಿತ ತಂಡಗಳ ಭಜನಾ ಕಾರ್ಯಕ್ರಮ, ಮಹಾಪೂಜೆ, ಶ್ರೀ ದೇವಿಯ ಗೋಂದೊಳು ಪೂಜೆ, ಪ್ರಸಾದ ವಿತರಣೆ ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.