ಕಲ್ಮಂಜ: ಕಲ್ಮಂಜ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ವಿಮಲಾ ರವರ ಅಧ್ಯಕ್ಷತೆಯಲ್ಲಿ ಫೆ.20ರಂದು ಪಂಚಾಯತ್ ಸಭಾಭವನದಲ್ಲಿ ಜರುಗಿತು.
ಮಾರ್ಗದರ್ಶಕ ಅಧಿಕಾರಿಯಾಗಿ ಪಶುಸಂಗೋಪನೆ ಇಲಾಖೆಯ ಡಾ. ವಿಶ್ವನಾಥ ಸಿ. ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.
ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.
ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪೂರ್ಣಿಮಾ, ಪಂಚಾಯತ್ ಸದಸ್ಯರುಗಳಾದ ರಾಧಾಕೃಷ್ಣ ಗೌಡ, ಶ್ರೀಮತಿ ಲೀಲಾ, ಶ್ರೀಮತಿ ಸವಿತಾ, ಪ್ರವೀಣ, ವರದಾಕ್ಷ ಆಚಾರ್ಯ, ಎಂ. ಶ್ರೀಧರ, ಕೃಷ್ಣಮೂರ್ತಿ, ಶ್ರೀಮತಿ ಶೋಭಾವತಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ ಆರ್ ಸಾಲಿಯಾನ್ ಸ್ವಾಗತಿಸಿ, ಕಾರ್ಯದರ್ಶಿ ಸರೋಜಿನಿ ವಾರ್ಡ್ ಸಭೆಯ ಬೇಡಿಕೆಯನ್ನು ವಾಚಿಸಿದರು. ಸಿಬ್ಬಂದಿ ರಮೇಶ್ ವಂದಿಸಿದರು.