April 18, 2025
Uncategorized

ಫೆ.26 ಬಳಂಜದಲ್ಲಿ ಗುರುಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ- ಆಮಂತ್ರಣ ಪತ್ರಿಕೆ ಬಿಡುಗಡೆ

ಬಳಂಜ: ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ,ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ ನಾಲ್ಕೂರು ತೆಂಕಕಾರಂದೂರು ಇದರ ಆಶ್ರಯದಲ್ಲಿ ಫೆ.26 ರಂದು ನಡೆಯುವ ಶ್ರೀ ಸತ್ಯನಾರಾಯಣ ಪೂಜೆ, ಗುರುಪೂಜೆ,ಸರ್ವೇಶ್ವರೀ ದೇವಿಯ ಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ ಹಾಗೂ ರಾಜೋತ್ಸವ ಪ್ರಶಸ್ತಿಯ ಅಭಿನಂದನಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಸಂಘದ ಗೌರವಾಧ್ಯಕ್ಷ ಹೆಚ್.ಧರ್ಣಪ್ಪ ಪೂಜಾರಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಕಳೆದ 46 ವರ್ಷಗಳ ಪರಂಪರೆಯಿರುವ ಸಂಘದಲ್ಲಿ ಹಲವಾರು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ.ಈ ಬಾರಿ ಸಂಘದ ಕಾರ್ಯಚಟುವಟಿಕೆಗಳನ್ನು ಗುರುತಿಸಿ ಸರಕಾರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.

ಕಾರ್ಯಕ್ರಮ ಹಾಗೂ ನೂತನ ಅಡುಗೆ ಕೊಠಡಿ ಇದರ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೇರವೇರಿದಲಿದ್ದಾರೆ. ಧಾರ್ಮಿಕ ಉಪನ್ಯಾಸವನ್ನು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ.ತುಕಾರಾಂ ಪೂಜಾರಿ ಮಾಡಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು, ಐವನ್ ಡಿಸೋಜ, ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಗುರುಪ್ರಸಾದ್,ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ,ಬೆಳ್ತಂಗಡಿ ಶ್ರೀ ಗು.ನಾ.ಸ್ವಾ.ಸೇ.ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಬಳಂಜ ಗ್ರಾ.ಪಂ ಅಧ್ಯಕ್ಷೆ ಶೋಭಾ ಕುಲಾಲ್ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾ.2 ಬೊಳ್ಳಜ್ಜ ಮೂಲಸ್ಥಾನದಲ್ಲಿ ಅಗೇಲು ಸೇವೆ

ನಂಬಿದವರ ಇಷ್ಟಾರ್ಥ ನೇರವೇರಿಸುವ ಬೊಳ್ಳಜ್ಜ ದೈವದ ಸಾರ್ವಜನಿಕ ಅಗೇಲು ಸೇವೆಯು ಫೆ.2 ರಂದು ಆದಿತ್ಯವಾರ ಸಂಜೆ ಗಂಟೆ 6.30 ರಿಂದ ಬೊಳ್ಳಾಜೆ ಮೂಲ ಸ್ಥಾನದಲ್ಲಿ ಜರುಗಲಿದೆ.ಅಗೇಲು ಸೇವೆಗೆ ರೂ. 300 ನಿಗದಿಪಡಿಸಲಾಗಿದೆ. ನೂರಾರು ಸಂಖ್ಯೆಯಲ್ಲಿ ಭಕ್ತರು ಬಂದು ಅಗೇಲು ಸೇವೆ ನೀಡುತ್ತಾರೆ.

ಫೆ.23 ವಾರ್ಷಿಕ ಕ್ರೀಡಾಕೂಟ
ಸಂಘದ ಪೂಜೆಯ ಹಿನ್ನಲೆಯಲ್ಲಿ ಯುವ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ ವರ್ಷಂಪ್ರತಿ ನಡೆಯುವ ವಾರ್ಷಿಕ ಕ್ರೀಡಾಕೂಟ ಬ್ರಹ್ಮಶ್ರೀ- 2025 ಫೆ.23 ರಂದು ನಡೆಯಲಿದೆ. ಪುರುಷರಿಗೆ,ಮಕ್ಕಳಿಗೆ, ಮಹಿಳೆಯರಿಗೆ ವಿವಿಧ ಕ್ರೀಡೆಗಳು ನಡೆಯಲಿದೆ.

Related posts

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಗೇರುಕಟ್ಟೆ 52ನೇ ವಷ೯ದ ಶ್ರೀ ಗಣೇಶೋತ್ಸವ ಪ್ರಯುಕ್ತ ಕೆಸರ್ಡೊಂಜಿದಿನ

Suddi Udaya

ಭಾ.ಜ.ಪಾ ಬೆಳ್ತಂಗಡಿ ಮಂಡಲ ವತಿಯಿಂದ ಚುನಾವಣಾ ನಿರ್ವಹಣಾ ಸಮಿತಿಯ ಸಭೆ

Suddi Udaya

ಕಣಿಯೂರು ಗ್ರಾಪಂ.ವ್ಯಾಪ್ತಿಯಲ್ಲಿ ಉಚಿತರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
error: Content is protected !!