ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಟೆಂಪೋ ಪಲ್ಟಿಯಾಗಿರುವ ಘಟನೆ ಬೆಳ್ತಂಗಡಿಯ ಮಹಾವೀರ ನಗರ, ನಮನ ಪೆಟ್ರೋಲ್ ಪಂಪ್ ಬಳಿ ನಡೆದಿದೆ.
ಬೆಳ್ತಂಗಡಿಯಿಂದ ಮೂಡಬಿದಿರೆ ಕಡೆಗೆ ಚಲಿಸುತ್ತಿದ್ದ ಗೂಡ್ಸ್ ಟೆಂಪೋವೊಂದು ಚಾಲಕನ ಅತಿ ವೇಗದ ಚಾಲನೆಯಿಂದ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.