
ಬೆಳ್ತಂಗಡಿ: ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾ ಅಧ್ಯಕ್ಷರುಗಳ ತರಬೇತಿ ಶಿಬಿರ ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಕೆ ಪುಟ್ಟಸ್ವಾಮಿ ಗೌಡರ ನೇತೃತ್ವದಲ್ಲಿ ದಾವಣಗೆರೆ ಜಿಲ್ಲಾ ಹರಿಹರದ ಪ್ರೊ. ಬಿ ಕೃಷ್ಣಪ್ಪ ಸ್ಮಾರಕ ಭವನದಲ್ಲಿ ನಡೆಯಿತು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ನಿವೃತ್ತ ಅಪಾರ ಕಾರ್ಮಿಕ ಆಯುಕ್ತ ವಸಂತ್ ಕುಮಾರ್ ಹಿಟ್ಟಣಗಿ, ಹಿರಿಯ ವಕೀಲ ಅನಂತ ನಾಯ್ಕ , ಚಳ್ಳಕೆರೆ ಶಾಸಕ ರಘು ಮೂರ್ತಿ, ಕಂಪ್ಲಿ ಶಾಸಕ ಗಣೇಶ್,ಮಾಯಕೊಂಡ ಶಾಸಕ ಬಸವಂತಪ್ಪ, ಮಾನವ ಬಂಧುತ್ವ ವೇದಿಕೆಯ ಮುಖ್ಯ ಸಂಚಾಲ ಪ್ರೊ. ರಾಮಚಂದ್ರಪ್ಪ, ಹರಿಹರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ, ಕೆಪಿಸಿಸಿ ಕಾರ್ಮಿಕ ಘಟಕದ

ಪ್ರಧಾನ ಕಾಯ೯ದಶಿ೯ ಅಬ್ದುಲ್ ರಹಿಮಾನ್ ಪಡ್ಪು, ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಉಪಾಧ್ಯಕ್ಷರುಗಳಾದ ಅರುಣಿ ಗೌಡ ಹಾಗೂ ಮೋಹನ್ ಕುಮಾರ್ ಉಪಸ್ಥಿತರಿದ್ದರು ಹಿರಿಯ ಮುಖಂಡರುಗಳು ಹಾಗು ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.