ಬೆಳ್ತಂಗಡಿ: ಕುಕ್ಕೇಡಿ ಡಾ. ಬಿ. ಆರ್. ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಗೆ ಹೆಚ್ಚುವರಿಯಾಗಿ ರೂ 50 ಲಕ್ಷ ಮಂಜೂರಾತಿಗೆ ಸರಕಾರ ಆದೇಶ ನೀಡಿದೆ.
ಅನುದಾನದಲ್ಲಿ ಕುಕ್ಕೇಡಿ ಡಾ. ಬಿ.ಆರ್.ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಗೆ ಹೆಚ್ಚುವರಿಯಾಗಿ ರೂ.50.00 ಲಕ್ಷಗಳ ಪೈಕಿ, ಮೊದಲ ಕಂತಿನಲ್ಲಿ ರೂ.12.50 ಲಕ್ಷಗಳನ್ನು ಜಿಲ್ಲಾಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲೆ ರವರಿಗೆ ಬಿಡುಗಡೆ ಮಾಡಲು ಉದ್ದೇಶಿಸಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.