ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ಸ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಮಟ್ಟದ ಗೋಲ್ಡನ್ ಆ್ಯರೋ ಪರೀಕ್ಷೆಯನ್ನು ಬರೆದು ಉತ್ತೀರ್ಣರಾಗಿದ್ದು , ರಾಷ್ಟ್ರೀಯ ಮಟ್ಟದ ಗೋಲ್ಡನ್ ಆ್ಯರೋ ಪ್ರಶಸ್ತಿ ಪತ್ರ ಗಳನ್ನು ಪಡೆದಿರುತ್ತಾರೆ.

ಇವರಿಗೆ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಸಲಹೆಯ ಮೇರೆಗೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಶಿಕ್ಷಕಿ ಪ್ರಮೀಳಾ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿ, ಜಿಲ್ಲಾ ಮಟ್ಟ , ರಾಜ್ಯಮಟ್ಟ ,ರಾಷ್ಟ್ರ ಮಟ್ಟಕ್ಕೆ ವಿದ್ಯಾರ್ಥಿಗಳನ್ನು ತಯಾರು ಗೊಳಿಸುತ್ತಿದ್ದಾರೆ.