ಬೆಳ್ತಂಗಡಿ: 2015ರಲ್ಲಿ ನೆರಿಯ ಗ್ರಾಮದ ಕಾಟಾಜೆ ನಿವಾಸಿ ಸುಂದರ ಮಲೆಕುಡಿಯ ಹಾಗೂ ಕುಟುಂಬದ ಮೇಲೆ ಹಲ್ಲೆ ಮತ್ತು ಕೈ ಬೆರಳು ಕತ್ತರಿಸಿದ ಪ್ರಕರಣದಲ್ಲಿ ನ್ಯಾಯಾಲಯದ ಶಿಕ್ಷೆ ಆದೇಶ ಪ್ರಕಟವಾಗಿರುವುದು ಸುಂದರ ಮಲೆಕುಡಿಯ ಅವರ ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ ಎಂದು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಪ್ರಕರಣದ ಗಂಭೀರತೆಯನ್ನು ಮನಗಂಡು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯು 2015ರಲ್ಲಿ ಉಜಿರೆಯಿಂದ ಬೆಳ್ತಂಗಡಿವರೆಗೆ ಬೃಹತ್ ಪಾದಯಾತ್ರೆ ಮತ್ತು ಪ್ರತಿಭಟನೆಯನ್ನು ನಡೆಸಿತ್ತು.
ಎಸ್‌ಡಿಪಿಐ ನಾಯಕರು ಸುಂದರ ಮಲೆಕುಡಿಯ ಅವರನ್ನು ಭೇಟಿಯಾಗಿ ದೈರ್ಯ ತುಂಬಿದ್ದರು. ನ್ಯಾಯಕ್ಕಾಗಿ ಹೋರಾಟದ ನೇತೃತ್ವ ವಹಿಸಿದ್ದರು. ಹೋರಾಟದ ಬಳಿಕ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.
ನ್ಯಾಯಾಲಯ ಆರೋಪಿಗಳ ವಿರುದ್ದ ಆರೋಪಗಳು ಸಾಬೀತಾಗಿರುವ ಹಿನ್ನಲೆಯಲ್ಲಿ ಶಿಕ್ಷೆ ವಿಧಿಸಿ ಆದೇಶ ನೀಡಿರುವುದು ತಡವಾದರು ಸಂತ್ರಸ್ತರಿಗೆ ಹಾಗೂ ಹೋರಾಟಕ್ಕೆ ಸಿಕ್ಕ ಜಯವಾಗಿದೆ ಎಂದು ಅಕ್ಬರ್ ಬೆಳ್ತಂಗಡಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ