23 C
ಪುತ್ತೂರು, ಬೆಳ್ತಂಗಡಿ
February 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ

ಉಜಿರೆ : ತಾಲೂಕಿನ ವಿದ್ಯುತ್ ಬಳಕೆದಾರರ ಜನ ಸಂಪರ್ಕ ಸಭೆ ಉಜಿರೆಯ ಮೆಸ್ಕಾಂ ಉಪ ವಿಭಾಗದ ಕಚೇರಿಯಲ್ಲಿ ಫೆ.20 ರಂದು ಜರಗಿತು.
ನೂತನ ಸಬ್ ಸ್ಟೇಷನ್ ಫೀಡರ್ ಗಳನ್ನು ನಿರ್ಮಿಸಲು ಸರಕಾರಿ ಜಾಗ ಇಲ್ಲದಿರುವ ಕಡೆ ಖಾಸಗಿ ಜಾಗಗಳನ್ನು ಖರೀದಿಸಬೇಕು ಎಂಬ ವಿಚಾರವನ್ನು ಕಡಿರುದ್ಯಾವರ ಗ್ರಾಮದ ಸುದರ್ಶನ್ ರಾವ್ ಪ್ರಸ್ತಾಪಿಸಿದರು.
ಈ ವೇಳೆ ಮಾತನಾಡಿದ ಬಂಟ್ವಾಳ ವಿಭಾಗದ ಇಇ ವೆಂಕಟೇಶ್, ಜಿಲ್ಲಾಧಿಕಾರಿಗಳು ನಿಗದಿಪಡಿಸಿದ ದರದಲ್ಲಿ ಸ್ಥಳ ಕೊಡುವವರು ಇದ್ದಲ್ಲಿ ಇಲಾಖೆ ಸಿದ್ಧವಿದೆ ಎಂದರು.


ಬೆಳಾಲಿನಲ್ಲಿ 110 ಕೆವಿ ಸಬ್ ಸ್ಟೇಷನ್ ನಿರ್ಮಾಣಕ್ಕೆ ಅರಣ್ಯ ಇಲಾಖೆಯ ಹಸ್ತಕ್ಷೇಪ ಇರುವ ಕುರಿತು ಸಭೆಗೆ ತಿಳಿಸಲಾಯಿತು.
ಬೆಳಾಲು ಫೀಡರ್ ನಲ್ಲಿ ಹೆಚ್ಚಿನ ವಿದ್ಯುತ್ ಸಮಸ್ಯೆ ಇರುವ ಕುರಿತು ಪದ್ಮಗೌಡ ಅವರು ಗಮನ ಸೆಳೆದರು.
ಬೆಳಾಲು ಫೀಡರ್ ಗೆ ಕಕ್ಕಿಂಜೆ ಸಬ್ ಸ್ಟೇಷನ್ ನಿಂದ ವಿದ್ಯುತ್ ಪೂರೈಕೆ ವ್ಯವಸ್ಥೆ ಮಾಡಲಾಗಿದೆ ಇದರಿಂದ ಸಮಸ್ಯೆ ಪರಿಹಾರವಾಗಲಿದೆ ಎಂದು ಅಧಿಕಾರಿ ಉತ್ತರಿಸಿದರು.
ದಾಮೋದರ ಸುರುಳಿ ಅವರು ಮಾತನಾಡಿ ರೋಸ್ಟರ್, ಪವರ್ ಕಟ್ ನ ವೇಳಾಪಟ್ಟಿಯನ್ನು ಗ್ರಾಹಕರಿಗೆ ನೀಡುವಂತೆ ಆಗ್ರಹಿಸಿದರು.


ಮುಂಡಾಜೆಯ ಅರಳಿ ಕಟ್ಟೆ ಪರಿವರ್ತಕದ ಲೈನ್ ನ ಸುಮಾರು 100 ಮೀ. ನಷ್ಟು ದೂರಕ್ಕೆ ವಿದ್ಯುತ್ ಕಂಬಗಳಿಲ್ಲದೆ ಅಪಾಯಕಾರಿ ಸ್ಥಿತಿ ಇದೆ ಎಂಬ ವಿಚಾರವನ್ನು ಪುಷ್ಪರಾಜ ಶೆಟ್ಟಿ ಗಮನಕ್ಕೆ ತಂದರು.
ಪವರ್ ಮ್ಯಾನ್ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಉಜಿರೆ ಗ್ರಾಪಂ ಸದಸ್ಯ ನಾಗೇಶ್ ರಾವ್ ಸಭೆಗೆ ತಿಳಿಸಿದರು.
ಜನಸಂಪರ್ಕ ಸಭೆಯಲ್ಲಿ ಬಂದಿರುವ ದೂರುಗಳನ್ನು ಪರಿಶೀಲಿಸಿ ಶೀಘ್ರ ಕ್ರಮ ಕೈಗೊಳ್ಳುವ ಕುರಿತು ಅಧಿಕಾರಿಗಳು ಭರವಸೆ ನೀಡಿದರು.

ಇಕ್ಕಟ್ಟಿನ ಜಾಗ : ಮೆಸ್ಕಾಂ ಕಚೇರಿಯ ತೀವ್ರ ಇಕ್ಕಟ್ಟಿನ ಜಾಗದಲ್ಲಿ ಸಭೆ ನಡೆಸಿರುವುದು ವಿದ್ಯುತ್ ಬಳಕೆದಾರರ ಮತ್ತು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಯಿತು.ಮುಂದಿನ ಸಭೆಯನ್ನು ವಿಶಾಲವಾದ ಜಾಗದಲ್ಲಿ ಆಯೋಜಿಸುವಂತೆ ವಿದ್ಯುತ್ ಬಳಕೆದಾರರು ಆಗ್ರಹಿಸಿದರು.


ಮಂಗಳೂರು ಮೆಸ್ಕಾಂ ವೃತ್ತದ ಎಸ್ ಇ ಕೃಷ್ಣರಾಜ ಉಪಸ್ಥಿತರಿದ್ದರು. ಬೆಳ್ತಂಗಡಿ ಮೆಸ್ಕಾಂ ಉಪ ವಿಭಾಗದ ಎಇಇ ಕ್ಲೆಮೆಂಟ್ ಬೆಂಜಮಿನ್ ಬ್ರ್ಯಾಗ್ಸ್ ಸ್ವಾಗತಿಸಿದರು. ಉಜಿರೆ ಉಪ ವಿಭಾಗದ ಎಇಇ ಈ ಪ್ರವೀಣ್ ವಂದಿಸಿದರು.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

Suddi Udaya

ಕೊಕ್ಕಡ ಸಿಪಿಐಎಂ ಶಾಖಾ ಕಾರ್ಯದರ್ಶಿ ಅಣ್ಣು ಮೊಗೇರ ನಿಧನ

Suddi Udaya

ಕೊಕ್ಕಡ: ತಲೆಗೆ ಮರಬಿದ್ದು ಮಹಿಳೆಯ ಧಾರುಣ ಸಾವು:

Suddi Udaya

ಧರ್ಮಸ್ಥಳ ಅಶೋಕನಗರದಲ್ಲಿ 75 ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya
error: Content is protected !!