36.4 C
ಪುತ್ತೂರು, ಬೆಳ್ತಂಗಡಿ
February 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

ಉಜಿರೆ : ಶಿಕ್ಷಣದಲ್ಲಿ ಭಾರತೀಯತೆಯನ್ನು ಮೈಗೂಡಿಸಿಕೊಳ್ಳಬೇಕು, ಆತ್ಮಪ್ರಜ್ಞೆ, ಅಂತ:ಸತ್ವಗಳನ್ನು ರೂಢಿಸಿಕೊಳ್ಳಬೇಕು. ಶಿಸ್ತಿನ ವ್ಯಾಸಂಗದೊಂದಿಗೆ ದೃಢತೆಯನ್ನು ಮೈಗೂಡಿಸಿಕೊಂಡು ಪ್ರಗತಿ ಪಥದತ್ತ ಸಾಗಬೇಕು. ದೃಢತೆಯ ಕಡೆಗೆ ಗುರಿಯನ್ನು ಇಟ್ಟುಕೊಂಡು ನಡೆದಾಗ ನಮ್ಮ ವಿದ್ಯಾಸಂಸ್ಥೆ ನೀಡಿದ ಶಿಕ್ಷಣ ಸಾರ್ಥಕವಾಗುತ್ತದೆ. ಜೊತೆಗೆ ಮಾನವೀಯತೆಯನ್ನು ರೂಢಿಸಿಕೊಂಡು ಬಾಳಿದರೆ ಗೌರವ ಸಿಗುತ್ತದೆ. ಗೌರವ ಹುಡುಕಿಕೊಂಡು ಬರುವ ರೀತಿಯಲ್ಲಿ ನಾವು ಬೆಳೆಯಬೇಕು ಎಂದು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯವರಾದ ಡಾ ಸತೀಶ್ಚಂದ್ರ ಎಸ್ ಇವರು ಎಸ್.ಡಿ.ಎಂ. ಬಿ.ಎಡ್., ಡಿ.ಎಡ್. ಹಾಗೂ ಮಹಿಳಾ ಐ.ಟಿ.ಐ. ಜಂಟಿಯಾಗಿ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಿದ್ದ ವಾರ್ಷಿಕೋತ್ಸವ ಸಮಾರಂಭ ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ಭಾಷಣದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ದ.ಕ.ಜಿ.ಪ. ಮಂಗಳೂರಿನ ಮಾಜಿ ಉಪಾಧ್ಯಕ್ಷೆ ಶ್ರೀಮತಿ ರಾಜಶ್ರೀ ಎಸ್ ಹೆಗ್ಡೆ ಇವರು ಅನುಭವ, ಛಲ, ಸತತ ಪ್ರಯತ್ನಗಳ ಮೂಲಕ ಗುರಿಯನ್ನು ಸಾಧಿಸಬಹುದು. ಅವಮಾನ, ಅನುಮಾನ, ಸಮ್ಮಾನಗಳಿಲ್ಲದೆ ಸಾಧನೆ ಸಾಧ್ಯವಿಲ್ಲ. ಮನಸ್ಸಿನ ಧೀಶಕ್ತಿಯನ್ನು ಎಂದಿಗೂ ತ್ಯಜಿಸಬಾರದು. ಒದಗಿ ಬರುವ ಅವಕಾಶಗಳನ್ನು ಕೈಬಿಡಬಾರದು. ಜೀವನದಲ್ಲಿ ಗುರಿ ಸ್ಪಷ್ಟವಿದ್ದು ಸರಿದಾರಿಯಲ್ಲಿ ಸಾಗಿದಾಗ ಬದುಕಿಗೆ ಅರ್ಥ ಬರುತ್ತದೆ. ಯಾವ ಕೆಲಸವನ್ನು ಮಾಡಿದರೂ ಅದಕ್ಕೆ ಪ್ರಯತ್ನ ಮತ್ತು ಆತ್ಮವಿಶ್ವಾಸ ಮುಖ್ಯ. ಆಗ ಮಾತ್ರ ಯಶಸ್ಸು ಲಭಿಸುತ್ತದೆ ಎಂದರು.


ಎಸ್.ಡಿ.ಎಂ. ಬಿ.ಎಡ್., ಡಿ.ಎಡ್. ಹಾಗೂ ಮಹಿಳಾ ಐಟಿಐಯ ಪಠ್ಯ-ಪಠ್ಯೇತರ ಚಟುವಟಿಕೆಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಮಂಗಳೂರು ವಿಶ್ವವಿದ್ಯಾನಿ¯ಯ ಫೆಬ್ರವರಿ 2023 ಮತ್ತು 2024 ರಲ್ಲಿ ನಡೆಸಿದ ಬಿ.ಎಡ್, ಪರೀಕ್ಷೆಯಲ್ಲಿ 3, 4, ಹಾಗೂ7ನೇ ರ‍್ಯಾಂಕ್ ಪಡೆದ ಭವ್ಯಾ ಡಿ ನಾಯಕ್, ತೇಜಸ್ವಿ ಕೆ ಮತ್ತು ಮಂಜುಶ್ರೀ ಡಿ ನಾಯ್ಕ ಹಾಗೂ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, ಬೆಂಗಳೂರು ಇವರು ನಡೆಸಿದ ಜುಲೈ 2024 ರಲ್ಲಿ ನಡೆಸಿದ ಡಿ.ಎಡ್. ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಭವ್ಯಾ ಎನ್ ಇವರನ್ನು ಸನ್ಮಾನಿಸಲಾಯಿತು. ಹಾಗೆಯೇ ರಾಷ್ಟ್ರೋಥಾನ ಪ್ರತಿಷ್ಠಾನ ಬೆಂಗಳೂರು ಇವರು ಆಯೋಜಿಸಿದ್ದ ರಾಜ್ಯಮಟ್ಟದ ಇಂಗ್ಲೀಷ್ ಭಾಷಣ ಸ್ಪರ್ಧೆಯಲ್ಲಿ ಸ್ಪರ್ಧಿಸಿ ಪ್ರಥಮ ಸ್ಥಾನವನ್ನು ಪಡೆದ ಬಿ.ಎಡ್. ಪ್ರಶಿಕ್ಷಣಾರ್ಥಿ ವಿನೀತ್ ಲ್ಯಾನ್ಸನ್ ಸಿಕ್ವೇರಾ ಇವರನ್ನು ಕೂಡಾ ಸನ್ಮಾನಿಸಲಾಯಿತು. ವಾರ್ಷಿಕೋತ್ಸವದ ಅಂಗವಾಗಿ ನಡೆಸಿದ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.


ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಸಲ್ಡಾನ, ,ಮಹಿಳಾ ಐಟಿಐ ಕಾಲೇಜಿನ ಪ್ರಾಂಶುಪಾಲರಾದ ವಿ ಪ್ರಕಾಶ್ ಕಾಮತ್ ಹಾಗೂ ಡಿ.ಎಲ್.ಇಡಿ. ಕಾಲೇಜಿನ ಅನುಷಾ ಇವರು ತಮ್ಮ ತಮ್ಮ ಸಂಸ್ಥೆಯ ವಾರ್ಷಿಕ ವರದಿಯನ್ನು ಓದಿದರು.
ವೇದಿಕೆಯಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ಧನ್ಯಕುಮಾರ್, ಎಸ್.ಡಿ.ಎಂ. ಬಿ.ಎಡ್., ಡಿ.ಎಡ್. ಹಾಗೂ ಮಹಿಳಾ ಐಟಿಐ ಯ ವಿದ್ಯಾರ್ಥಿ ನಾಯಕರುಗಳಾದ ಕೀರ್ತನ್ ಕುಮಾರ್, ಫಾತಿಮಾ ಹಾಗೂ ರಾಜಶ್ರೀ ಉಪಸ್ಥಿತರಿದ್ದರು.
ಎಸ್.ಡಿ.ಎಂ. ಮಹಿಳಾ ಐಟಿಐ ಕಾಲೇಜಿನ ವಿದ್ಯಾರ್ಥಿನಿ ಅಶೂರಾ ಸ್ವಾಗತಿಸಿ, ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ಪ್ರಶಿಕ್ಷಣಾರ್ಥಿಗಳಾದ ಕೀರ್ತನ್ ಕುಮಾರ್ ವಂದಿಸಿ, ಮಮತಾ ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಬೆಳ್ತಂಗಡಿ ತಾಲೂಕಿನ ಉತ್ತಮ ಸಂಘ ಪ್ರಶಸ್ತಿ

Suddi Udaya

ಲಾಯಿಲ: ಕೊರಂ ಕೊರತೆಯಿಂದ ಮುಂದೂಡಲಾಗಿದ್ದ ಗ್ರಾ.ಪಂ. ಸಾಮಾನ್ಯ ಸಭೆಯು ನ.29 ರಂದು ಯಶಸ್ವಿ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ತೆರವು ಪ್ರಕರಣ: ಕತ೯ವ್ಯಕ್ಕೆ ಅಡ್ಡಿ ಆರೋಪಿಸಿ ಶಾಸಕರ ಮೇಲೆ ಆರ್.ಎಫ್.ಓ ದೂರು : ಪ್ರಕರಣ ದಾಖಲು

Suddi Udaya

ನಾಳ ಸ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್‌ ಮೇಳ

Suddi Udaya

ಶಾಸಕ ಹರೀಶ್ ಪೂಂಜರನ್ನು ಬಂಧಿಸದಂತೆ ಹಾಗೂ ನೋಟಿಸ್ ನೀಡದಂತೆ ಸರ್ಕಾರಕ್ಕೆ ತಾಕೀತು ಮಾಡಿದ ಕರ್ನಾಟಕ ಹೈಕೋರ್ಟ್

Suddi Udaya
error: Content is protected !!