37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.23: ಕಲ್ಮಂಜ ದ.ಕ.ಜಿ.ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕಲ್ಮಂಜ : ದ.ಕ.ಜಿ.ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಲ್ಮಂಜ ಶಾಲಾ ಶತಮಾನೋತ್ಸವ ಸಮಿತಿ ಅಂಗವಾಗಿ ಬೆನಕ ಹೆಲ್ತ್ ಸೆಂಟರ್, ಉಜಿರೆ ಮತ್ತು ಬೆನಕ ಚಾರಿಟೇಬಲ್ ಟ್ರಸ್ಟ್‌ ಉಜಿರೆ ಇವರ ಪ್ರಾಯೋಜಕತ್ವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಫೆ.23ರಂದು ಬೆಳಿಗ್ಗೆ ಗಂಟೆ 9-30ರಿಂದ 1-30ರವರೆಗೆ ಕಲ್ಮಂಜ ದ.ಕ.ಜಿ.ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಲಿರುವುದು.

ಕಾರ್ಯಕ್ರಮದ ಉದ್ಘಾಟನೆಯನ್ನು ಉಜಿರೆ ಬೆನಕ ಹೆಲ್ತ್ ಸೆಂಟರ್ ಆಡಳಿತ ನಿರ್ದೇಶಕರು ಡಾ| ಗೋಪಾಲಕೃಷ್ಣ ಕೆ. ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನುಕಲ್ಮಂಜ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ವಿಮಲ ವಹಿಸಲಿದ್ದಾರೆ.

ಶಿಬಿರದಲ್ಲಿ ಪಾಲ್ಗೊಳ್ಳುವ ತಜ್ಞ ವೈದ್ಯರು: ಶಸ್ತ್ರಚಿಕಿತ್ಸಾ ತಜ್ಞರು – ಡಾ| ವಿಜೇತ್ ರೈ, ಸಾಮಾನ್ಯ ಆರೋಗ್ಯ ಹಾಗೂ ತುರ್ತು ಚಿಕಿತ್ಸಾ ತಜ್ಞರು- ಡಾ| ಆದಿತ್ಯ ರಾವ್, (ಫಿಸಿಶಿಯನ್), ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರು -ಡಾ| ಅಂಕಿತಾ ಜಿ ಭಟ್, ಎಲುಬು ಕೀಲು ತಜ್ಞರು- ಡಾ| ರೋಹಿತ್ ಜಿ. ಭಟ್, ಮಕ್ಕಳ ತಜ್ಞರು ಡಾ| ಶಂತನು ಪ್ರಭು,

ಶಿಬಿರದ ವಿಶೇಷತೆ : ಉಚಿತ ಇ. ಸಿ. ಜಿ., ರಕ್ತದೊತ್ತಡ, ಮಧುಮೇಹ ತಪಾಸಣೆ, ಔಷಧ ವಿತರಣೆ.

Related posts

ಬಡಗಕಾರಂದೂರು ಶಾಲಾಭಿವೃದ್ಧಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಾಲಾ ಎಸ್.ಡಿ.ಎಂ.ಸಿ ಯಿಂದ ಶಾಸಕ ಹರೀಶ್ ಪೂಂಜಾರವರಿಗೆ ಮನವಿ ಸಲ್ಲಿಕೆ

Suddi Udaya

ಹೆದ್ದಾರಿ ಅಧಿಕಾರಿಗಳ ಗೈರು-ಕೋರಂ ಕೊರತೆ: ಕುವೆಟ್ಟು ಗ್ರಾಮಸಭೆ ಮುಂದೂಡಿಕೆ

Suddi Udaya

ಸುಲ್ಕೇರಿ: ಪಿ‌ಎಂ ಜನ್ ಮನ್ ಯೋಜನೆಯಡಿ ರೂ. 6.8 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಟ್ರಿಂಜೆ- ಸುಲ್ಕೇರಿ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ದ.ಕ ಜಿಲ್ಲಾ ಸಂಸದ ಕ್ಯಾ‌.ಬ್ರಿಜೇಶ್ ಚೌಟರವರಿಂದ ಶಿಲಾನ್ಯಾಸ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಭಜನಾ ಮಂದಿರಕ್ಕೆ ಸಹಾಯಧನ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಸಹಭಾಗಿತ್ವದಲ್ಲಿ ಯಶೋವನ ಭೇಟಿ ಕಾರ್ಯಕ್ರಮ

Suddi Udaya
error: Content is protected !!