April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಕ್ಷಿತ್ ಶಿವರಾಂ ಅವರ ಮನವಿಗೆ ಅಧಿಕಾರಿಗಳ ಸ್ಪಂದನೆ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ

ಬೆಳ್ತಂಗಡಿ: ದ್ವಿತೀಯ ಪಿಯುಸಿ ವಿದ್ಯಾರ್ಥಿ ಜೀವನದಲ್ಲಿ ಬಹಳ ಮಹತ್ವದ ಘಟ್ಟ. ಇಲ್ಲಿ ತೆಗೆಯುವ ಒಂದೊಂದು ಅಂಕವೂ ಭವಿಷ್ಯಕ್ಕೆ ಬುನಾದಿ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆಗಳಲ್ಲಿ ಭೌತ ಶಾಸ್ತ್ರ, ರಸಾಯನ ಶಾಸ್ತ್ರ, ಜೀವ ಶಾಸ್ತ್ರ, ಅಥವಾ ಇತರ ಆಯ್ಕೆಯ ವಿಜ್ಞಾನ ವಿಷಯಗಳಲ್ಲಿ ತಲಾ 30 ರಂತೆ 3 ವಿಷಯಗಳಿಗೆ ಒಟ್ಟು 90 ಅಂಕಗಳಿವೆ.

ವಿದ್ಯಾರ್ಥಿಯ ಅತ್ಯುತ್ತಮ ಫಲಿತಾಂಶಕ್ಕೆ ಪ್ರಾಯೋಗಿಕ ಪರೀಕ್ಷೆಯ ಅಂಕಗಳು ತೀರಾ ಅವಶ್ಯ. ಜೊತೆಗೆ ಸಿ ಇ ಟಿ ಪರೀಕ್ಷೆಗೆ ಪಿಯು ಅಂಕಗಳನ್ನು ಕೂಡಾ ಪರಿಗಣನೆಗೆ ತೆಗೆದುಕೊಳ್ಳುವುದರಿಂದ , ಪ್ರಾಯೋಗಿಕ ಪರೀಕ್ಷೆಗಳನ್ನು ವಿದ್ಯಾರ್ಥಿಗಳು ನಿರ್ಲಕ್ಷಿಸುವಂತಿಲ್ಲ. ಈ ಹಿನ್ನೆಲೆಯಲ್ಲಿ ತೀರಾ ಅನಿವಾರ್ಯ ಕಾರಣಗಳಿಂದ ಪ್ರಾಯೋಗಿಕ ಪರೀಕ್ಷೆಗಳಿಗೆ ಗೈರು ಹಾಜರಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ಮಾಡಲು ಇಲಾಖೆಯನ್ನು ಕೋರಲು ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಅವರನ್ನು ಕೆಲವು ಉಪನ್ಯಾಸಕರು ಸಂಪರ್ಕಿಸಿ, ವಿನಂತಿಸಿದ್ದರು. ರಕ್ಷಿತ್ ಶಿವರಾಂ ಅವರು ಈ ಕುರಿತು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕಾರಿಗಳ ಗಮನ ಸೆಳೆದರು.


ಇದೀಗ ಮಂಡಳಿಯು ಈ ತಿಂಗಳ 24, 25 ಹಾಗೂ 27 ರಂದು ಗೈರು ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವಂತೆ ರಾಜ್ಯದ ಎಲ್ಲಾ ಉಪನಿರ್ದೇಶಕರಿಗೆ ಆದೇಶ ಹೊರಡಿಸಿದೆ. ಆ ಮೂಲಕ ಅನಿವಾರ್ಯ ಕಾರಣಗಳಿಂದ ಪ್ರಾಯೋಗಿಕ ಪರೀಕ್ಷೆ ತೆಗೆದು ಕೊಳ್ಳಲು ಅಸಾಧ್ಯವಾದ ವಿದ್ಯಾರ್ಥಿಗಳಿಗೆ ಮರು ಅವಕಾಶ ಕಲ್ಪಿಸಿದೆ. ತಮ್ಮ ಮನವಿಗೆ ಸ್ಪಂದಿಸಿದ ರಕ್ಷಿತ್ ಶಿವರಾಂ ಅವರಿಗೆ ಸಮಸ್ತ ವಿದ್ಯಾರ್ಥಿಗಳ ಪರವಾಗಿ ಉಪನ್ಯಾಸಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related posts

ಕುಕ್ಕೇಡಿ ಗ್ರಾ.ಪಂ. ನಿಂದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಅಂಡಿಂಜೆ ಸ. ಉ.ಪ್ರಾ.ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1.50 ಲಕ್ಷ ನೆರವು

Suddi Udaya

ಬಳಂಜದಲ್ಲಿ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘ ರಚನೆಗೆ ಬಳಂಜ, ನಾಲ್ಕೂರು, ತೆಂಕಕಾರಂದೂರು ರೈತ ಸದಸ್ಯರ ಬೇಡಿಕೆ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರತ್ಯೇಕ ಸೊಸೈಟಿ ರಚನೆಗೆ ನಿರ್ಣಯ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡ ರವರ ಮನೆಗೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪ್ರಮುಖರು ಭೇಟಿ, ಧನಸಹಾಯ ಹಸ್ತಾಂತರ

Suddi Udaya

ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಮಚ್ಚಿನ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಸಿಎಂ ಸಿದ್ದರಾಮಯ್ಯ ರಿಗೆ ಮನವಿ

Suddi Udaya
error: Content is protected !!