23.1 C
ಪುತ್ತೂರು, ಬೆಳ್ತಂಗಡಿ
February 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಸ್ತ್ರೀ ಶಕ್ತಿ ಸಂವರ್ಧನಾ ತರಬೇತಿ

ಕಲ್ಲಬೆಟ್ಟು : ಸ್ತ್ರೀ ಶಕ್ತಿಯ ಅಭಿವೃದ್ಧಿಗೆ ಒತ್ತು ನೀಡುವ ನಿಟ್ಟಿನಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಶಾಲಾ ಮಕ್ಕಳಿಗಾಗಿ “ವೀರೆ- ಸ್ತ್ರೀ ಶಕ್ತಿ ಸಂವರ್ಧನಾ ತರಬೇತಿ” ಕಾರ್ಯಕ್ರಮವು ಕಲ್ಲಬೆಟ್ಟುವಿನ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆಯಲ್ಲಿ ಉದ್ಘಾಟನೆಯಾಯಿತು.


ಕಾರ್ಯಕ್ರಮವನ್ನು ಉದ್ಘಾಟಿಸಿದ ಮೂಡುಬಿದಿರೆ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕಿ ಪ್ರತಿಭಾ ಅವರು ಹೆಣ್ಣುಮಕ್ಕಳ ಸುರಕ್ಷತೆಯ ಅವಶ್ಯಕತೆ, ಅವರ ಆತ್ಮವಿಶ್ವಾಸವನ್ನು ಹೆಚ್ಚಿಸಲು ತರಬೇತಿಗಳ ಮಹತ್ವವನ್ನು ವ್ಯಕ್ತಪಡಿಸುತ್ತ ಅವರ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು. ಮಕ್ಕಳ ಸುರಕ್ಷತೆಯ ವಿಚಾರದಲ್ಲಿ ಸಮಾಜದ ಮತ್ತು ಶಿಕ್ಷಣ ಸಂಸ್ಥೆಗಳ ಪಾತ್ರ ಮತ್ತು ಪ್ರಾಮುಖ್ಯತೆ ಕುರಿತು ಮಾತನಾಡಿದ ಅವರು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಅವರ ಸಮಾಜಮುಖಿ ಕಾರ್ಯಕ್ರಮಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.


ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆಯ ಪ್ರಾಚಾರ್ಯ ಎಸ್. ಜಿ. ಹಿರೇಮಠ್ ಅವರು ಮಕ್ಕಳಲ್ಲಿ ಸ್ವಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ತರಬೇತಿಯು ಪ್ರಮುಖ ಪಾತ್ರ ವಹಿಸಲಿದೆ. ಹೆಣ್ಣು ಸುರಕ್ಷಿತ ವಲಯದಲ್ಲಿ ಬದುಕುತ್ತ ಸಮಾಜದ ಶಕ್ತಿಯಾಗಿ ರೂಪುಗೊಳ್ಳಬೇಕು. ಮಕ್ಕಳಲ್ಲಿ ಶಕ್ತಿ ಸ್ಫೂರ್ತಿಯನ್ನು ತುಂಬುವ ಎಕ್ಸಲೆಂಟ್ ಸಂಸ್ಥೆಯ ಸಂಕಲ್ಪ ಅಭಿನಂದನೀಯ ಎಂದು ತಿಳಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ ಮಾತನಾಡುತ್ತಾ, ಹೆಣ್ಣು ದೈಹಿಕವಾಗಿ ಮತ್ತು ಮಾನಸಿಕವಾಗಿ ಸಬಲಳಾದಾಗ ಸಮಾಜವು ಸಶಕ್ತವಾಗಿ ರೂಪುಗೊಳ್ಳುತ್ತದೆ. ಹೆಣ್ಣು ಮಕ್ಕಳು ತಮ್ಮ ಹಕ್ಕುಗಳು, ಅವಕಾಶಗಳು ಮತ್ತು ಸಬಲೀಕರಣದ ಬಗ್ಗೆ ಅರಿವು ಹೊಂದಿದಾಗ ಮಾತ್ರ ಸಮಾನತೆಯ ಸಮಾಜವನ್ನು ನಿರ್ಮಿಸಬಹುದು. ವಿವಿಧ ಕ್ಷೇತ್ರಗಳಲ್ಲಿ ತನ್ನ ಸಾಮರ್ಥ್ಯವನ್ನು ಸಾಬೀತು ಪಡಿಸುತ್ತಾ ಕೌಶಲಗಳನ್ನು ಬಳಕೆ ಮಾಡಿಕೊಂಡು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳುವತ್ತ ಹೆಣ್ಣು ಯೋಚಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿ ಈ ಕಾರ್ಯಕ್ರಮದ ಯೋಜನೆಯನ್ನು ಪ್ರಸ್ತುತಪಡಿಸಿದರು.


ಸಭಾ ಕಾರ್ಯಕ್ರಮದ ನಂತರ ಇಂಚರ ಫೌಂಡೇಷನ್ ಸಂಸ್ಥೆಯ ಸಿಬ್ಬಂದಿ ತರಬೇತಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ವೇದಿಕೆಯಲ್ಲಿ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆಯ ಪ್ರಭಾರ ನಿಲಯ ಪಾಲಕಿ ಆಶಾಲತಾ ಮತ್ತು ವಿದ್ಯಾರ್ಥಿ ಪ್ರತಿನಿಧಿ ಕು. ಚೈತ್ರಾ ಪಾಟೀಲ್ ಉಪಸ್ಥಿತರಿದ್ದರು. ಉಪನ್ಯಾಸಕ ತೇಜಸ್ವೀ ಭಟ್ ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್ ಎಸ್ ಎಲ್ ಸಿ ಫಲಿತಾಂಶ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳದಲ್ಲಿ 53ನೇ ವರ್ಷದ ಪುರಾಣ ಕಾವ್ಯ ವಾಚನ – ಪ್ರವಚನ ಉದ್ಘಾಟನೆ

Suddi Udaya

ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ: ಬೈಕ್ ಸವಾರ ರೆಖ್ಯ ನಿವಾಸಿ ಥೋಮಸ್ ಸಾವು

Suddi Udaya

ವಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ ಆರೋಪ: ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು

Suddi Udaya

ಉರುವಾಲು ಹಾಗೂ ಪದ್ಮುಂಜ ಶ್ರೀ ವರಾಮಹಾಲಕ್ಷ್ಮಿ ಪೂಜೆ ಹಾಗೂ ಒಕ್ಕೂಟ ಪದಗ್ರಹಣ ಸಮಾರಂಭ

Suddi Udaya

ಮುಂಡಾಜೆ : ಶಿವಂ ಬೇಕರಿ ಮತ್ತು ಪ್ಲವರ್ ಡೆಕೋರೇಶನ್ ಶುಭಾರಂಭ

Suddi Udaya
error: Content is protected !!