ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಅಸಮರ್ಪಕ ಹಾಗೂ ಅವೈಜ್ಞಾನಿಕ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಜಿಲ್ಲಾದ್ಯಂತ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನ ಫೆ.22 ರಂದು ಬೆಳ್ತಂಗಡಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ವಕೀಲರಾದ ಪ್ರಶಾಂತ್, ಬಂಧುತ್ವ ಜಿಲ್ಲಾಧ್ಯಕ್ಷ ಚೆನ್ನಕೇಶವ, ಪತ್ರಕರ್ತರಾದ ಅಚುಶ್ರೀ ಬಂಗೇರು, ಆಶ್ರಫ್ ಅಲಿಕುಂಞಿ, ಎಸ್.ಡಿ.ಪಿ.ಐ ಜಿಲ್ಲಾ ಕಾರ್ಯದರ್ಶಿ ನವಾಜ್ ಕಟ್ಟೆ, ಬೆಳ್ತಂಗಡಿ ಎಸ್.ಡಿ.ಪಿ.ಐ ಅಧ್ಯಕ್ಷ ಅಕ್ಬರ್, ಕಾರ್ಯದರ್ಶಿ ರಶೀದ್ ಹಾಗೂ ಇತರರು ಉಪಸ್ಥಿತರಿದ್ದರು.