27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳ ಸ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್‌ ಮೇಳ

ಗೇರಕಟ್ಟೆ : ನಾಳ ಸ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ ನಡೆಯಿತು. ಕಳಿಯ ಗ್ರಾಮ ಪಂಚಾಯತ್‌ ಸದಸ್ಯರು ಹಾಗೂ ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಮಜಲು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.


ಸಭೆಯ ಅಧ್ಯಕ್ಷ ಸ್ಥಾನವನ್ನು ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಮೋಹನ ಗೌಡ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಪುಷ್ಪ ಮೆಟ್ರಿಕ್ ಮೇಳದ ಪರಿಚಯದ ಭಿತ್ತಿ ಪತ್ರವನ್ನು ಅನಾವರಣಗೊಳಿಸಿದರು. ಬೆಳ್ತಂಗಡಿ ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ರಾಜೇಂದ್ರ ಕೃಷ್ಣರವರು ಉಪಸ್ಥಿತರಿದ್ದು ಮೆಟ್ರಿಕ್ ಮೇಳದ ಮಳಿಗೆಗಳಿಗೆ ಚಾಲನೆ ನೀಡಿದರು.


ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಾಘವೇಂದ್ರ ಅಸ್ರಣ್ಣರವರು ಶಾಲಾ ಅಕ್ಷರ ದಾಸೋಹ ಕಾರ್ಯಕ್ರಮಕ್ಕೆ ನೂರು ಊಟದ ತಟ್ಟೆಗಳನ್ನು ಕೊಡುಗೆಯಾಗಿ ನೀಡಿದರು. ಶಾಲೆಯ ಪರವಾಗಿ ಅವರನ್ನು ಸನ್ಮಾನಿಸಿ ಗೌರವಿಸಿದರು. ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ರೀತಾ ಚಂದ್ರಶೇಖರ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಪೆಂರ್ಬುಡ ಉಪಸ್ಥಿತರಿದ್ದರು. ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಶಿಕ್ಷಣ ಸಂಯೋಜಕರಾದ ಚೇತನಾಕ್ಷಿ ದೈಹಿಕ ಪರಿವೀಕ್ಷಣಾಧಿಕಾರಿಯಾದ ಸುಜಯ್ ರವರು ಮೆಟ್ರಿಕ್ ಮೇಳಕ್ಕೆ ಭೇಟಿ ನೀಡಿ ಪ್ರಶಂಸೆಯನ್ನು ವ್ಯಕ್ತಪಡಿಸಿದರು.

ಶಾಲಾ ಮುಖ್ಯೋಪಾಧ್ಯಾಯರಾದ ರೊನಾಲ್ಡ್ ಡಿಮೆಲ್ಲೊರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು ಸಹ ಶಿಕ್ಷಕಿ ಕವಿತಾ ರವರು ಸ್ವಾಗತಿಸಿದರು. ಸಹ ಶಿಕ್ಷಕಿ ಇಂದುಶ್ರೀ ರೈ ಹೆಚ್.ಅವರು ವಂದಿಸಿದರು. ಸಹಶಿಕ್ಷಕಿ ಸಿಸಿಲಿಯಾ ಫ್ಲಾವಿಯಾ ಡಿಕೋಸ್ತ ನಿರೂಪಣೆ ಮಾಡಿದರು. ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರುಗಳು ಶಾಲಾ ಶಿಕ್ಷಕರು ಹಾಗೂ ಪೋಷಕರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು. ಶಾಲಾ ವಿಧ್ಯಾರ್ಥಿಗಳು 20 ಹೆಚ್ಚಿನ ಮಳಿಗೆಗಳ ಮೂಲಕ ಹಲವಾರು ಬಗೆಯ ತರಕಾರಿ, ಬೇಕರಿ ಮತ್ತು ಹಣ್ಣು ಹಂಪಲುಗಳನ್ನು ವ್ಯಾಪಾರ ವಹಿವಾಟು ನಡೆಸಿದರು.

Related posts

ದೆಹಲಿಯಲ್ಲಿ ನಿರ್ಮಾಣಗೊಳ್ಳಲಿರುವ ಯೋಧರ ಉದ್ಯಾನವನಕ್ಕೆ ಬೆಳ್ತಂಗಡಿಯಿಂದ ಮಣ್ಣು ಸಮರ್ಪಣೆ

Suddi Udaya

ಧರ್ಮಸ್ಥಳ : ಚರಂಡಿಗೆ ಉರುಳಿ ಬಿದ್ದ ವಾಹನಗಳು

Suddi Udaya

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ವಿಶ್ವ ಮಹಿಳಾ ದಿನದ ಅಂಗವಾಗಿ ಆರ್ಥಿಕ ನೆರವು

Suddi Udaya

“ಅಯ್ಯಪ್ಪ ಸ್ವಾಮಿಯ “108” ಶರಣುಘೋಷವನ್ನು 58 ಸೆಕೆಂಡಿನಲ್ಲಿ ಹೇಳಿದ ಉಜಿರೆಯ ಉದಯ್ ಎ.ಕೆ ಆಚಾರ್ಯ ರವರಿಗೆ “ಇಂಡಿಯಾ ಬುಕ್ ಆಫ್ ರೇಕಾರ್ಡ್”, ಕಲಾಂಸ್ ವರ್ಲ್ಡ್ ರೇಕಾರ್ಡ್, ಇಲೈಟ್ ಬುಕ್ ಆಫ್ ರೇಕಾರ್ಡ್”

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ ಪೌಲೋಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್

Suddi Udaya
error: Content is protected !!