
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರಾದ ಬೇಡನ್ ಪೊವೆಲ್ ಹಾಗೂ ಲೇಡಿ ಬೇಡನ್ ಪೋವೆಲ್ ರವರ ಜನ್ಮದಿನದ ಅಂಗವಾಗಿ ಚಿಂತನಾ ದಿನಾಚರಣೆಯನ್ನು ಬನ್ನಿಸ್, ಕಬ್ಸ್ ಬುಲ್ ಬುಲ್ಸ್, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಪೋಷಕರು ನೀಡಿದ ಒಟ್ಟು ಸೇರಿಸಿದ ಹಣದಿಂದ ಒಳ ರೋಗಿಗಳಿಗೆ ಹಣ್ಣುಗಳನ್ನು ವಿತರಿಸಿದರು. ಅಲ್ಲದೆ ಬಡಬಗ್ಗರಿಗೆ ವಸ್ತ್ರದಾನವನ್ನು ನೀಡಿದರು.


ಹಾಗೆ ಸಮಾಜಕ್ಕೆ ಉತ್ತಮ ಸೇವೆಯನ್ನು ನೀಡುತ್ತಿರುವ ಇಲಾಖೆಗಳನ್ನು ಗುರುತಿಸಿ ಪ್ರಶಂಸಾ ಪತ್ರವನ್ನು ನೀಡಿದರು ಹಾಗೂ ಬನ್ನಿಸ್, ಕಬ್ ಬುಲ್ ಬುಲ್ಸ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಸ್ಕೌಟ್ಸ್ ಮತ್ತು ಗೈಡ್ಸ್ ಸಂಯೋಜಕ ಶಿಕ್ಷಕಿ , ಬೆಳ್ತಂಗಡಿ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾರವರ ನೇತೃತ್ವದಲ್ಲಿ, ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಸಮ್ಮುಖದಲ್ಲಿ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದರು. ಸ್ಕೌಟ್ ಶಿಕ್ಷಕ ರಾದ ಜಯರಾಮ್ ಸಹಕರಿಸಿದರು.