April 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸ. ಹಿ. ಪ್ರಾ. ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

ಸರಳಿಕಟ್ಟೆ: ಯೇನಪೋಯ ವಿಶ್ವವಿದ್ಯಾಲಯ ವತಿಯಿಂದ 2024-25 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ಶಿಬಿರವನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.

ಶಿಬಿರದ ಉದ್ಘಾಟನೆಯನ್ನು ಅವಿನಾಶ್ ಎಚ್ ಗೌಡ, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಉಪ್ಪಿನಂಗಡಿ ಇವರು ಜ್ಯೋತಿಯನ್ನು ಬೆಳಗುವುದರ ಮೂಲಕ ಉದ್ಘಾಟನೆಯನ್ನು ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ದಯಾನಂದ್ ರವರು ಅಧ್ಯಕ್ಷೀಯ ನುಡಿಗಳನ್ನು ಮಾತನಾಡುವ ಮೂಲಕ ಶಿಬಿರಾರ್ಥಿಗಳಿಗೆ ಸ್ವಾಗತ ಹಾಗೂ ಶುಭವನ್ನು ಕೋರಿದರು.

ಕಾರ್ಯಕ್ರಮದಲ್ಲಿ ದಯಾನಂದ್, ಅವಿನಾಶ್ ಎಚ್ ಗೌಡ, ಎಂ.ಜಿ.ಅಬೂಬಕರ್ ಪುತ್ತು, ಶ್ರೀಮತಿ ಅನುರಾಧ ಪಿ ಆರ್, ಸುಬ್ರಮಣ್ಯ ರಾವ್, ಇನಾಸ್ ರೋಡ್ರಿಗಾಸ್, ಅಬ್ಬಾಸ್ ಮಡಿಕೇರಿ ಬೆಟ್ಟು,ಅಬ್ದುಲ್ ಹಕೀಂ ತನಲ್, ಅನ್ವರ್, ನೌಮಾನ್, ಶ್ರೀಮತಿ ಜುಬೈದ ವಕೀಲರು, ಶ್ರೀಮತಿ ಸಫೀನ, ಮಹಮ್ಮದ್ ಕೈಸ್, ಕುಮಾರಿ ಫಿಲ್ಮಿ ಮೆಹಬೂಬ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರಾರ್ಥನೆ ಗೀತೆಯೊಂದಿಗೆ ಎನ್ ಎಸ್ ಎಸ್ ಶಿಬಿರದ ಸಂಯೋಜಕರಾದ ಅಬ್ದುಲ್ ರಶೀದ್ ಸ್ವಾಗತಿಸಿದರು. ಶಾಕೀರ್ ವಂದಿಸಿದರು, ಶಿಕ್ಷಕರಾದ ಸುನಿಲ್ ಕುಮಾರ್ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು, ಅಭಿಷೇಕ್ ಆರ್ .ಎನ್. ಸಹಕರಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಅಯೋದ್ಯೆ ಶ್ರೀರಾಮ ಮಂದಿರದ ಆಮಂತ್ರಣ ಪತ್ರಿಕೆ ಹಸ್ತಾಂತರ

Suddi Udaya

ವೇಣೂರು ಯುವವಾಹಿನಿ ಘಟಕದ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya

ಮಾಲಾಡಿ: ಕೊಲ್ಪೆದಬೈಲ್ ಉಮೇಶ್ ಶೆಟ್ಟಿಯವರ ಮನೆಯಲ್ಲಿ ಪ್ರೇತ ಬಾಧೆ: ಬೆಂಕಿ ಹಿಡಿದು ಉರಿಯುವ ಬಟ್ಟೆ-ನೆಲಕ್ಕೆ ಬೀಳುತ್ತಿರುವ ಪಾತ್ರೆ ಬಟ್ಟಲು; ಮನೆಯವರಲ್ಲಿ ಆತಂಕ ಸೃಷ್ಟಿ

Suddi Udaya

ಸರ್ವರಿಗೂ ಹೊಸ ವರ್ಷದ ಶುಭಾಶಯಗಳು: ಪರಸ್ಪರ ಪ್ರೀತಿ-ವಿಶ್ವಾಸ, ಗೌರವದೊಂದಿಗೆ, ಶಾಂತಿ ಸಾಮರಸ್ಯ ಮೂಡಿಬರಲಿ, ಮಾನವೀಯತೆ ಮೆರೆಯಲಿ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ಧರ್ಮಸ್ಥಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya
error: Content is protected !!