ಬೆಳ್ತಂಗಡಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ “ಹೊಂಬೆಳಕು 2025” ಸ್ಥಳೀಯಾಡಳಿತ ಸಂಭ್ರಮ ಕ್ರೀಡಾ ಕೂಟವು ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಕಾರದೊಂದಿಗೆ, ಗ್ರಾಮ ಸ್ವರಾಜ್ ಪ್ರತಿಷ್ಠಾನ ಮತ್ತು ಹೊಂಬೆಳಕು ಕ್ರೀಡಾ ಕೂಟ ಸಂಘಟನಾ ಸಮಿತಿ ಇದರ ಜಂಟಿ ಆಶ್ರಯದಲ್ಲಿ ಫೆ. 22 ರಂದು ಮಂಗಳೂರು ಸಹ್ಯಾದ್ರಿ ಕ್ರೀಡಾಂಗಣ ಅಡ್ಯಾರ್ ನಲ್ಲಿ ಜರುಗಿತು.
ಕಾರ್ಯಕ್ರಮದಲ್ಲಿ 2024-25ನೇ ಸಾಲಿನಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ನರೇಗಾ ಯೋಜನೆಯಲ್ಲಿ ಅತಿಹೆಚ್ಚು ಮಾನವ ದಿನಗಳನ್ನು ಸೃಜಿಸಿರುವ ಸಾಧನೆಗಾಗಿ ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ರವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.