ರಸ್ತೆಯಲ್ಲಿ ಅಡ್ಡ ಬಂದ ನಾಯಿಯನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಪಲ್ಟಿಯಾದ ಘಟನೆ ಅಳದಂಗಡಿಯಲ್ಲಿ ಶನಿವಾರ ನಡೆದಿದೆ.

ಇಲ್ಲಿನ ಕೆದ್ದು ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ಮಲ್ಪೆಗೆ ಸರಕು ಸಾಗಿಸುತ್ತಿದ್ದ ಪಿಕಪ್ ವಾಹನಕ್ಕೆ ನಾಯಿ ಅಡ್ಡ ಬಂದಾಗ ಚಾಲಕ ಹಠಾತ್ ಬ್ರೇಕ್ ಹಾಕಿದಾಗ ನಿಯಂತ್ರಣ ತಪ್ಪಿ ಪಕ್ಕದ ಧರೆಗೆ ಗುದ್ದಿ ಉರುಳಿ ಬಿದ್ದಿದೆ.
ವಾಹನದಲ್ಲಿ ಚಾಲಕನ ಸಹಿತ ಮೂವರು ಇದ್ದು, ಅಲ್ಪಸ್ವಲ್ಪ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
