23.6 C
ಪುತ್ತೂರು, ಬೆಳ್ತಂಗಡಿ
April 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಕ್ರಿಯಗೊಳಿಸಿ: ಎಂ ಸಿ ವೇಣುಗೋಪಾಲ್

ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ಗೆ ಕೆಪಿಸಿಸಿ ಉಪಾಧ್ಯಕ್ಷರು, ಪಕ್ಷದ ಜಿಲ್ಲೆಯ ಉಸ್ತುವಾರಿ ಎಂ ಸಿ ವೇಣುಗೋಪಾಲ್ ಬೇಟಿ, ನೀಡಿ ಮುಂಬರುವ ತಾಲೂಕು ಪಂಚಾಯತ್ ಜಿಲ್ಲಾ ಪಂಚಾಯತ್ ಚುನಾವಣೆ, ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ, ಇದು ಕಾರ್ಯಕರ್ತರ ಚುನಾವಣೆ, ಇಂದಿನಿಂದಲೇ ಪಕ್ಷವನ್ನು ಬೂತ್ ಮಟ್ಟದಲ್ಲಿ ಸಂಘಟಿಸುವ ಮೂಲಕ ಪಕ್ಷದ ಅಭ್ಯರ್ಥಿಯ ಗೆಲುವಿಗೆ, ನಾಯಕರು ಕಾರ್ಯಕರ್ತರು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು, ಎಂದರು.


ಉಸ್ತುವಾರಿ ಎಂ ಸಿ ವೇಣುಗೋಪಾಲ್ ರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸ್ವಾಗತಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲಿಯನ್ ಮಾಲಾಡಿ, ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಹಕೀಮ್ ಕೊಕ್ಕಡ, ಉಪಾಧ್ಯಕ್ಷರಾದ ನವೀನ್ ಗೌಡ ಸವಣಾಲು ಜಿಲ್ಲಾ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಎಸ್.ಸಿ ಘಟಕದ ಅಧ್ಯಕ್ಷ ನೇಮಿರಾಜ್ ಕಿಲ್ಲೂರು, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಮೊಹಮದ್ ಹನೀಫ್, ಉಜಿರೆ, ಪಕ್ಷದ ಪ್ರಮುಖರಾದ ಬಿಕೆ ವಸಂತ್, ಲಕ್ಷ್ಮಣ್ ಗೌಡ ಬಂಗಾಡಿ, ಪ್ರವೀಣ್ ಹಳ್ಳಿ ಮನೆ, ಕಲಂದರ್ ಕೊಕ್ಕಡ, ಪ್ರಭಾಕರ್ ಶಾಂತಿ ಕೋಡಿ, ದಿನೇಶ್ ಮೂಲ್ಯ ಕೊಂಡೆ ಮಾರು, ಹರೀಶ್ ಕುಮಾರ್ ಗೇರುಕಟ್ಟೆ, ರಾಘವ ಗೇರುಕಟ್ಟೆ, ಗುರುರಾಜ್ ಗುರಿಪಳ್ಳ, ಹರಿಪ್ರಸಾದ್ ಇರುವತ್ರಾಯ, ಶ್ರೀಮತಿ ಮಧುರ ರಾಘವ , ಪುಷ್ಪರಾಜ್‌ ನಾವರ ಸದಾನಂದ ಬಳಂಜ, ಅಬ್ದುಲ್ ಸಮದ್ ಇಂದಬೆಟ್ಟು, ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಪರಿಷ್ಕೃತ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಕರಂಬಾರು ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು.ಪವೀಕ್ಷ ರೈ ಗುಂಡೆಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Suddi Udaya

ನಿಡ್ಲೆ ಗ್ರಾ.ಪಂ. ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆ

Suddi Udaya

ಗೆಡ್ಡೆ (tumor) ಕಾಯಿಲೆಯಿಂದ ಬಳಲುತ್ತಿರುವ ಕಳೆಂಜದ ಪುರುಷೋತ್ತಮರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ, ಪುರಸ್ಕಾರ

Suddi Udaya
error: Content is protected !!