23 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ರೋಟರಿ ಆಯನ್ಸ್ ಕ್ಲಬ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ನೇಲ್ಯಡ್ಕಕ್ಕೆ ವಿಜ್ಞಾನ ಉಪಕರಣಗಳ ಕೊಡುಗೆ

ಬೆಳ್ತಂಗಡಿ ತಾಲೂಕಿನ ಅತ್ಯಂತ ಗ್ರಾಮೀಣ ಪ್ರದೇಶವಾದ ನೇಲ್ಯಡ್ಕದಲ್ಲಿರುವ ಸರಕಾರಿ ಪ್ರೌಢಶಾಲೆಗೆ ಬೆಳ್ತಂಗಡಿಯ ರೋಟರಿ ಆಯನ್ಸ್ ಕ್ಲಬ್ ವತಿಯಿಂದ ಪ್ರೌಢ ಶಾಲೆಗೆ ಅಗತ್ಯವಿದ್ದ ವಿಜ್ಞಾನ ಪ್ರಯೋಗಾಲಯ ಉಪಕರಣಗಳನ್ನು ಕೊಡುಗೆಯಾಗಿ ನೀಡಲಾಯಿತು.

ರೋಟರಿ ಆನ್ಸ್ ಕ್ಲಬ್‌ನ ಅಧ್ಯಕ್ಷೆ ಶ್ರೀಮತಿ ಗಾಯತ್ರಿ ಶ್ರೀಧರ್ ಮುತುವರ್ಜಿಯಿಂದ ಈ ಉಪಕರಣಗಳು ನೇಲ್ಯಡ್ಕ ಪ್ರೌಢಶಾಲೆಗೆ ಲಭಿಸಿದವು.

ಬೆಳ್ತಂಗಡಿಯ ರೊ. ಯಶವಂತ್ ಪಟವರ್ಧನ್ ಮತ್ತು ಶ್ರೀಮತಿ ರಶ್ಮಿ ಪಟವರ್ಧನ್ ದಂಪತಿ ಈ ಕೊಡುಗೆಯನ್ನು ಪ್ರಾಯೋಜಿಸಿದ್ದರು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಯಶವಂತ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಆಯನ್ಸ್ ಕ್ಲಬ್‌ನ ಅಧ್ಯಕ್ಷೆ ಶ್ರೀಮತಿ ಗಾಯತ್ರಿ ಶ್ರೀಧರ್, ಕಾರ್ಯದರ್ಶಿ ಡಾ. ವಿನಯಾ ಕಿಶೋರ್, ಶ್ರೀಮತಿ ರಶ್ಮಿ ಪಟವರ್ಧನ್, ಶ್ರೀಮತಿ ಹೇಮಾ ಮತ್ತು ಸಂಸ್ಥೆಯ ಮುಖ್ಯೋಪಾಧ್ಯಾಯ ರಾಜೇಂದ್ರ ಕೃಷ್ಣ ಹಾಗೂ ಎಲ್ಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಉದಯ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಅರವಿಂದ ಗೋಖಲೆ ಸ್ವಾಗತಿಸಿ, ವಿಜಯ ಕುಮಾರ್ ವಂದಿಸಿದರು.

Related posts

ಬೆಳ್ತಂಗಡಿಯಲ್ಲಿ ವಿ.ಪ. ಶಾಸಕ ಹರೀಶ್ ಕುಮಾರ್ ರವರಿಂದ ಸರಕಾರದ “ಶಕ್ತಿ”ಯೋಜನೆಗೆ ಚಾಲನೆ

Suddi Udaya

ಫೆ-2: ಅಭ್ಯಾಸ್ ಅಕಾಡೆಮಿ ಮತ್ತು ಪೈ ಅಕಾಡೆಮಿಯಿಂದ ಪರಿಣಿತ ವಿಷಯ ಸಂಪನ್ಮೂಲ ತರಬೇತುದಾರರಿಂದ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಲಯನ್ ಎಂ. ಜಿ. ಶೆಟ್ಟಿಯವರಿಗೆ ಪ್ರತಿಷ್ಠಿತ ಎಮ್.ಜೆ.ಎಫ್ ಗೌರವ

Suddi Udaya

ಉಜಿರೆಯ ಖಾಸಗಿ ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಸಾರಿ ಮೇಳ: ಸೀರೆಗಳ ಮೇಲೆ ಶೇ.50 ಡಿಸ್ಕೌಂಟ್: ಕೆಲವೇ ದಿನಗಳು ಮಾತ್ರ

Suddi Udaya
error: Content is protected !!