25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಅಂಡಿಂಜೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರ ನೇಮಕಕ್ಕೆ ಗ್ರಾಮಸ್ಥರ ಆಗ್ರಹ

ಅಂಡಿಂಜೆ: ಅಂಡಿಂಜೆ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ನಿತಿನ್ ರವರ ಅಧ್ಯಕ್ಷತೆಯಲ್ಲಿ ಫೆ.24ರಂದು ಜರುಗಿತು. ಮಾರ್ಗದರ್ಶಕ ಅಧಿಕಾರಿಯಾಗಿ ಮುಖ್ಯ ಪಶುವೈದ್ಯಾಧಿಕಾರಿ ಡಾ. ವಿನಯ್ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ವೇಣೂರು ಮತ್ತು ನಾರಾವಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರುಗಳ ನೇಮಕ ಆಗಬೇಕು. 24×7 ಸೇವೆ ನಡೆಯಬೇಕು. 30 ವರ್ಷಗಳ ಹಿಂದಿನ ವ್ಯವಸ್ಥೆಗಳು ಇಂದು ಕುಂಟಿತಗೊಂಡಿದೆ. 30 ವರ್ಷದ ಹಿಂದೆ ನಾರಾವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೆರಿಗೆಗಳು ನಡೆಯುತ್ತಿತ್ತು ಆದರೆ ಇಂದು ರೋಗಿಗಳು ಹೋಗುವುದೇ ಕಡಿಮೆ ಆಗಿದೆ ಗ್ರಾಮಸ್ಥರು ಹೇಳಿದರು.

ಪಂಚಾಯತ್ ವತಿಯಿಂದ 7 ಅಂಗನವಾಡಿ ಕೇಂದ್ರಗಳಿಗೆ ಆಟೋಪಕರಣಗಳನ್ನು ಹಾಗೂ ಪ್ರತಿಭಾಕಾರಂಜಿ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಕು. ಪ್ರಜ್ಞಾ ರವರನ್ನು ಗೌರವಿಸಲಾಯಿತು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಶ್ವೇತಾ, ಪಂಚಾಯತ್‌ ಸದಸ್ಯರುಗಳಾದ ರಂಜಿತ್, ಪರಮೇಶ್, ಶ್ರೀಮತಿ ಸೌಮ್ಯ, ಜಗದೀಶ್ ಹೆಗ್ಡೆ, ಶ್ರೀಮತಿ ಜಯಂತಿ, ಶ್ರೀಮತಿ ಶೋಭಾ ನಾಯ್ಕ, ಹರೀಶ್ ಹೆಗ್ಡೆ, ಶ್ರೀಮತಿ ಸರೋಜ, ಶ್ರೀಮತಿ ಸುಜಾತ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಹೆಗ್ಡೆ ಸ್ವಾಗತಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್ ಅನುಪಾಲನ ವರದಿ ವಾಚಿಸಿದರು. ದ್ವಿತೀಯ ದರ್ಜೆ ಲೆಕ್ಕ ಸಹಾಯಕಿ ಶ್ರೀಮತಿ ಮಮತಾ ವಂದಿಸಿದರು.

Related posts

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya

ಕೃಷಿಕ ಶೀನಪ್ಪ ಗೌಡ ಪಣಿಕ್ಕಲ್ ನಿಧನ

Suddi Udaya

ಪುದುವೆಟ್ಟು: ಅಡ್ಯಾದಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ 2024-25ನೇ ಸಾಲಿನ ಸ್ವಾಗತ ದಿನಾಚರಣೆ ವಿದ್ಯಾರ್ಥಿ ಸಂಘ ಹಾಗೂ ವಿಷಯವಾರು ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!