ಬೆಳ್ತಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳೆದ ಕೆಲವು ಸಮಯಗಳಿಂದ ನಡೆಯುತ್ತಿರುವ ಘಟನೆಗಳಿಂದ ಭಕ್ತರು ಹಾಗೂ ಗ್ರಾಮಸ್ಥರು ಅಸಾಮಾಧಾನಗೊಂಡಿರುವ ಬೆನ್ನಲ್ಲೇ ದೇವಸ್ಥಾನದ ಕಾಣಿಕೆ ಹುಂಡಿಯ ಬೀಗ ಒಡೆದು ಕಳ್ಳತನ ನಡೆದಿದೆ.
ಫೆ.22ರಂದು ರಾತ್ರಿ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಕಳ್ಳತನ ನಡೆದಿದೆ. ಎರಡು ದಿನಗಳ ಹಿಂದೆ ಯಾರೋ ಅಶ್ವತ್ಥ ಕಟ್ಟೆಯ ಗಿಡವನ್ನು ತುಂಡರಿಸಿದ್ದಾರೆ. ಈ ಬಗ್ಗೆ ಕೂಡ ಕ್ರಮ ಕೈಗೊಳ್ಳುವಂತೆ ಭಕ್ತರು ಆಗ್ರಹಿಸಿದ್ದಾರೆ. ಕಳೆದ ಒಂದು ವರುಷಗಳ ಹಿಂದೆ ರಾಜಕೀಯ ರಹಿತವಾಗಿ ಮಾದರಿ ಬ್ರಹ್ಮಕಲಶೋತ್ಸವ ನಡೆದಿದ್ದ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ರೀತಿ ನಡೆಯುತ್ತಿರುವುದು ಭಕ್ತರ ಮನಸ್ಸಿಗೆ ತೀವ್ರ ನೋವು ಉಂಟು ಮಾಡುತ್ತಿದೆ.