April 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಕಕ್ಕಿಂಜೆಯಲ್ಲಿ ಎಸ್‌ಡಿಪಿಐ ಚಾರ್ಮಾಡಿ ಗ್ರಾಮ ಸಮಿತಿಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಾರ್ಮಾಡಿ ಗ್ರಾಮ ಸಮಿತಿಯ ನೂತನ ಪಕ್ಷದ ಕಚೇರಿ ಉದ್ಘಾಟನೆಯ ಸಾರ್ವಜನಿಕ ಸಭೆ ಕಾರ್ಯಕ್ರಮ ರಹೀಮ್ ಬೀಟಿಗೆ ಅಧ್ಯಕ್ಷತೆಯಲ್ಲಿ ಕಕ್ಕಿಂಜೆಯಲ್ಲಿ ಫೆ.23ರಂದು ನಡೆಯಿತು.

ನೂತನ ಪಕ್ಷದ ಕಚೇರಿ ಉದ್ಘಾಟನೆಯನ್ನು ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೊ ನೆರವೇರಿಸಿದರು.

ಮುಖ್ಯ ಅತಿಥಿಯಾಗಿ ಕರ್ನಾಟಕ ರಾಜ್ಯ ಕಾರ್ಯದರ್ಶಿ ಅಂಗಡಿ ಚಂದ್ರು, ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಭಾಗವಹಿಸಿದ್ದರು.

ರಾಜ್ಯ ಸಮಿತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಅಂಗಡಿ ಚಂದ್ರು ಹಾಗೂ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆಯಾದ ನವಾಝ್ ಕಟ್ಟೆ ಅವರನ್ನು ಚಾರ್ಮಾಡಿ ಗ್ರಾಮ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕಕ್ಕಿಂಜೆ ಮಸೀದಿ ಅಧ್ಯಕ್ಷರು ಇಸ್ಮಾಯಿಲ್ ಗೊಳಿದಡಿ, ಮಸೀದಿ ಕಾರ್ಯದರ್ಶಿಗಳಾದ ಇಬ್ರಾಹಿಂ ಬೊಂಟ್ರಪಾಲ್, ಚಾರ್ಮಾಡಿ ಮಸೀದಿ ಮಾಜಿ ಅಧ್ಯಕ್ಷರು ಫಾಳ್ಕನ್ ಮೋನು, ಎಸ್‌ಡಿಪಿಐ ಬೆಂಬಲಿತ ಚಾರ್ಮಾಡಿ ಪಂಚಾಯತ್ ಸದಸ್ಯರಾದ ಸಿದ್ದೀಕ್ ಹಾಗೂ ಆಯಿಷಾ, ಮಾಜಿ ಪಂಚಾಯತ್ ಸದಸ್ಯರು ಸಿ ಮೋನಕ, ಉಜಿರೆ ಬ್ಲಾಕ್ ಅಧ್ಯಕ್ಷರಾದ ಮಹಮ್ಮದ್ ಆಲಿ ಉಜಿರೆ ಹಾಗೂ ಊರಿನ ನಾಗರೀಕರು ಕಾರ್ಯಕರ್ತರು ಉಪಸ್ಥಿತರಿದ್ದರು.
ಅಶ್ರಫ್ ಚಾರ್ಮಾಡಿ ಅತಿಥಿಗಳನ್ನು ಸ್ವಾಗತಿಸಿ, ಸಹಲ್ ನಿರ್ಸಾಲ್ ವಂದಿಸಿದರು. ಮರ್ಷಾ ಉಜಿರೆ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ ಕಾರ್ಯಕ್ರಮ ಉದ್ದೇಶಿಸಿ ಪ್ರಾಸ್ತಾವಿಸಿದರು.

Related posts

ಬೆಳ್ತಂಗಡಿ :ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯ

Suddi Udaya

ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಸಹಾಯ ಧನ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆ

Suddi Udaya

ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬೆಳ್ತಂಗಡಿಗೆ ಭೇಟಿ: ಸಾವ೯ಜನಿಕ ಅಹವಾಲು ಸ್ವೀಕಾರ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!