ಕಲ್ಮಂಜ: ಇತಿಹಾಸ ಪ್ರಸಿದ್ಧ ತುಳುನಾಡ ಸತ್ಯದ ಸಿರಿಗಳ ಮೂಲ ಆಲಡೆ ಕ್ಷೇತ್ರ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನ ನಡ್ವಾಲ್‌ನಲ್ಲಿ ಫೆ.26ರಂದು ಮಹಾಶಿವರಾತ್ರಿ ಪ್ರಯುಕ್ತವಾಗಿ ಶ್ರೀ ದೇವರಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಲಿದೆ.
ಬೆಳಿಗ್ಗೆ ಶ್ರೀ ದೇವರಿಗೆ ಏಕಾದಶ ರುದ್ರಾಭಿಷೇಕ ಮಧ್ಯಾಹ್ನ ಮಹಾಪೂಜೆ, ಸಂಜೆ ಸಾಮೂಹಿಕ ಶಿವ ಪಂಚಾಕ್ಷರಿ ಪಠಣ, ಶ್ರೀ ರಂಗ ಪೂಜೆ ಹಾಗೂ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಶಿವರಾತ್ರಿ ಉತ್ಸವ ಸಮಿತಿ ಅಧ್ಯಕ್ಷ ಪಾಂಡುರಂಗ ಮರಾಠೆ ಹಡೀಲು, ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಹಾಗೂ ಸದಸ್ಯರು ತಿಳಿಸಿದ್ದಾರೆ.