September 6, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿ

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾ

ಬೆಳ್ತಂಗಡಿ: ಸೇವಾಧಾಮ-ಸೇವಾಭಾರತಿ ಉತ್ತರ ಕನ್ನಡ ಜಿಲ್ಲೆ ಇದರ ಆಶ್ರಯದಲ್ಲಿ ಶಿರಸಿ ಸ್ಕ್ಯಾನ್ ಸೆಂಟರ್, ರೋಟರಿ ಕ್ಲಬ್ ಶಿರಸಿ ಹಾಗೂ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಶಿರಸಿ ಇವರ ಸಹಕಾರದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 30ನೇ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.

ಜನ ಸಾಮಾನ್ಯರಿಗೆ ಬೆನ್ನುಹುರಿ ಅಪಘಾತದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಹಾಗೇ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರನ್ನು ಮುಖ್ಯವಾಹಿನಿಗೆ ಕರೆ ತರುವ ಉದ್ದೇಶದಿಂದ ಫೆ.೨೪ರಂದು ಜಾಥಾವನ್ನು ನಡೆಸಲಾಯಿತು. ಶಿರಸಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನಾಗಪ್ಪ ಹಸಿರು ನಿಷಾನೆಯನ್ನು ಹಾರಿಸಿ ಜಾಥಾಕ್ಕೆ ಚಾಲನೆಯನ್ನು ನೀಡಿದರು.

ಮಾರಿಕಾಂಬ ದೇವಸ್ಥಾನದಿಂದ ಜಾಥಾವನ್ನು ಪ್ರಾರಂಭಿಸಿ ಹಳೆ ಬಸ್‌ಸ್ಟ್ಯಾಂಡ್ ಶಿರಸಿ ಮುಖಾಂತರ ಸಿಪಿ ಬಜಾರ್ ರೋಡ್ ನಿಂದ ಸರ್ಕಾರ್ ಹೋಟೆಲ್ ಮಾರ್ಗವಾಗಿ ದೇವಿಕೆರೆಯಿಂದ ಸಾಗಿ ಶಿರಸಿ ಸ್ಕ್ಯಾನ್ ಸೆಂಟರ್ ತನಕ ನಡೆಸಲಾಯಿತು.

ಈ ಸಂದರ್ಭದಲ್ಲಿ ಒಟ್ಟು ೧೩ ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು ಮತ್ತು ಆರೈಕೆದಾರರು, ಶಿರಸಿ ರೋಟರಿ ಕ್ಲಬ್ ಅಧ್ಯಕ್ಷ ರೊ| ಡಾ. ಸುಮನ್ ಹೆಗಡೆ, ಶಿರಸಿ ಸ್ಕ್ಯಾನ್ ಸೆಂಟರ್ ನಿರ್ದೇಶಕರು ರೊ| ಡಾ. ದಿನೇಶ್ ಹೆಗಡೆ, ಶಿರಸಿ ರೋಟರಿ ಕ್ಲಬ್ ಇವೆಂಟ್ ಛೇರ್‌ಮ್ಯಾನ್ ರೊ| ಮಹೇಶ್ ತೆಲಂಗ, ಶಿರಸಿ ರೋಟರಿ ಕ್ಲಬ್ ಕಾರ್ಯದರ್ಶಿ ರೊ| ಸರಸ್ವತಿ ಎನ್ ರವಿ ಹಾಗೂ ರೋಟರಿ ಕ್ಲಬ್ ನ ಇನ್ನಿತರ ಸದಸ್ಯರು, ಶಿರಸಿ ರೋಟರಿ ಕ್ಲಬ್ ಖಜಾಂಚಿ ರೋ| ವಿನಾಯಕ್ ಜೋಶಿ, ಸ್ಕ್ಯಾನ್ ಸೆಂಟರ್‌ನ ಮಣಿಕಂಠ, ಸೇವಾಧಾಮ ಸಂಸ್ಥಾಪಕ ಕೆ. ವಿನಾಯಕ ರಾವ್, ಸೇವಾಭಾರತಿ ಸಿಬ್ಬಂದಿ ವರ್ಗದವರು, ಹಾಗೂ ವಿದ್ಯಾರ್ಥಿಗಳು ಸೇರಿದಂತೆ ೧೦೦ ಮಂದಿ ಜಾಥದಲ್ಲಿ ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ನೇತ್ರ ತಜ್ಞರಾಗಿ ಡಾ| ರಮೇಶ್ ನೇಮಕ

Suddi Udaya

ಐಕಾನ್ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಬಹುಮಾನ ವಿತರಣೆ

Suddi Udaya

ಶಾಸಕ ಹರೀಶ್ ಪೂಂಜಾರವರ ಜನುಮದಿನದ ಪ್ರಯುಕ್ತ ಬಂದಾರು ಅಭಿಮಾನಿ ಬಳಗದಿಂದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಮಚ್ಚಿನ ಗ್ರಾ.ಪಂ. ನಿಂದ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಅಮ್ಮುಕುಮಾರ್ ರವರಿಗೆ ನುಡಿನಮನ

Suddi Udaya
error: Content is protected !!