ಕಕ್ಯಪದವು: ಎಲ್.ಸಿ.ಆರ್ ವಿದ್ಯಾಸಂಸ್ಥೆ ಕಕ್ಯಪದವು ಇಲ್ಲಿನ ಪದವಿಪೂರ್ವ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಬೀಳ್ಕೊಡುಗೆ ಸಮಾರಂಭವನ್ನು ಫೆ .24 ರಂದು ನಡೆಯಿತು.

ಸಂಸ್ಥೆಯ ಸಂಯೋಜಕರಾದ ಯಶವಂತ್ ಜಿ.ನಾಯಕ್ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಅವರ ಸರ್ವಾಂಗೀಣ ವಿಕಸನಕ್ಕೆ ಉತ್ತಮ ಪಠ್ಯೇತರ ಚಟುವಟಿಕೆಗಳು ತುಂಬಾನೇ ಅಗತ್ಯ ಎಂದು ಧನಾತ್ಮಕ ಮಾತುಗಳಿಂದ ಶುಭಹಾರೈಸಿದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಮತಿ ವಿಂದ್ಯಾಶ್ರೀ ಮಾತನಾಡಿ ವಿದ್ಯಾರ್ಥಿಗಳು ಸಿಕ್ಕಂತಹ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂಬ ಪ್ರೋತ್ಸಾಹದ ನುಡಿಯೊಂದಿಗೆ ಶುಭಹಾರೈಸಿದರು.
ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ ಅಧ್ಯಕ್ಷತೆ ವಹಿಸಿ ಪ್ರೇರಣಾತ್ಮಕ ಮಾತುಗಳೊಂದಿಗೆ ,ವಿದ್ಯಾರ್ಥಿಗಳು ತಮ್ಮ ಸಾಧನೆಯ ಹಾದಿಯಲ್ಲಿ ಹೆತ್ತವರ ಮಹತ್ತರವಾದ ಪಾತ್ರವನ್ನು ಎಂದಿಗೂ ಮರೆಯದೆ ತಮ್ಮ ಭವಿಷ್ಯದ ಬದುಕನ್ನು ರೂಪಿಸಬೇಕೆಂದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ಪ್ರಥಮ ಪಿ.ಯು.ಸಿ ವಿದ್ಯಾರ್ಥಿನಿ ಕು. ಕೃತಿಕಾ ಸ್ವಾಗತಿಸಿ , ವಿದ್ಯಾರ್ಥಿನಿ ಕು. ವೀಕ್ಷಾ ಅಭಿಪ್ರಾಯ ವ್ಯಕ್ತಪಡಿಸಿ , ಕು.ಅಕ್ಷಿತಾ ವಂದಿಸಿ, ಆರಿಫಾ ಹಾಗೂ ಸಫ್ರೀನಾ ಕಾರ್ಯಕ್ರಮ ನಿರೂಪಿಸಿದರು . ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿವಿಧ ಮನೋರಂಜನಾ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿದರು. ಸಂಸ್ಥೆಯ ಬೋಧಕ – ಬೋಧಕೇತರ ವರ್ಗದವರು ಉಪಸ್ಥಿತರಿದ್ದು ಕಾರ್ಯಕ್ರಮ ಸಂಪನ್ನಗೊಂಡಿತು.