April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳರವರಿಗೆ ಹಿಮಾಲಯ ವೃಕ್ಷಮಣಿದಾರರ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಸಂಸ್ಥೆ ಆಯೋಜಿಸಿದ ಹಿಮಾಲಯ ವೃಕ್ಷ ಮಣಿದಾರರ ತರಬೇತಿಯಲ್ಲಿ ತೇರ್ಗಡೆ ಹೊಂದಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ ಪ್ರಮೀಳ ಇವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ದೆ ದಯಾನಂದ ಸಾಗರ ಆಡಿಟೋರಿಯಂ ಕುಮಾರಸ್ವಾಮಿ ಲೇಔಟ್ ಬೆಂಗಳೂರಿನಲ್ಲಿ ಆಯೋಜಿಸಿದ ಹಿಮಾಲಯ ವೃಕ್ಷಮಣಿದಾರರ ಪ್ರಶಸ್ತಿ ಪತ್ರ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಪತ್ರವನ್ನು ಹಾಗೂ ರಾಜ್ಯ ಸಂಸ್ಥೆಯಿಂದ ಸನ್ಮಾನವನ್ನು ಪಡೆದುಕೊಂಡಿರುತ್ತಾರೆ.

ರಾಜ್ಯ ಸಂಸ್ಥೆಯಿಂದ ರಾಜ್ಯ ಮುಖ್ಯ ಆಯುಕ್ತರಾದ ಪಿಜಿಆರ್ ಸಿಂಧ್ಯಾ ರವರಿಂದ ಸನ್ಮಾನಿತರಾಗಿರುತ್ತಾರೆ. ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಗಂಗಪ್ಪಗೌಡ ಹಾಗೂ ಬಸವರಾಜ್, ರಾಜ್ಯ ತರಬೇತಿ ಗೈಡ್ ಆಯುಕ್ತರಾದ ಶ್ಯಾಮಲ , ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಪ್ರಭಾಕರ್ ಭಟ್, ಹೊನ್ನಮ್ಮ, ಕೃಪಾ ಉಪಸ್ಥಿತರಿದ್ದರು

Related posts

ಶಿಶಿಲ ಸ.ಉ.ಹಿ.ಪ್ರಾ. ಶಾಲೆಗೆ ಯೂತ್ ಫಾರ್ ಸೇವಾ ಎನ್.ಜಿ ಒ ಸಂಸ್ಥೆಯ ವತಿಯಿಂದ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಅಳವಡಿಕೆ

Suddi Udaya

ಉರುವಾಲು: ಗ್ರಾಮ ದೈವಗಳಿಗೆ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ಚೀಟಿ ಬಿಡುಗಡೆ

Suddi Udaya

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 376ನೇ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ನಾಪತ್ತೆಯಾಗಿದ್ದ ಮಾಚಾರು ನಿವಾಸಿ ಆಟೋ ಚಾಲಕ ಸುಧಾಕರ್ ಮೃತದೇಹ ನೆಲ್ಲಿಕಾರ್ ಕಾಡಿನಲ್ಲಿ ನೇಣು ಹಾಕಿಕೊಂಡ ರೀತಿಯಲ್ಲಿ ಪತ್ತೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರಿಂದ ಎರಡು ಕುಟುಂಬಕ್ಕೆ ಸಹಾಯಹಸ್ತ

Suddi Udaya
error: Content is protected !!