ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿ ವಿದ್ಯಾರ್ಥಿಗಳಿಗಾಗಿ ಮುಂಬೈನ ಫ್ರ್ಯಾಂಕ್ಲಿನ್ ಟೆಂಬಲ್ಟನ್ ಸಂಸ್ಥೆಯ ಸಹಯೋಗದೊಂದಿಗೆ ಕಾಲೇಜಿನ ವಾಣಿಜ್ಯಶಾಸ್ತ್ರ ಮತ್ತು ನಿರ್ವಹಣಾ ಶಾಸ್ತ್ರ ಸಂಘ ಮತ್ತು ಯುವ ರೆಡ್ ಕ್ರಾಸ್ ಘಟಕ ಇವುಗಳ ಆಶ್ರಯದಲ್ಲಿ ಹಣಕಾಸಿನ ಹೂಡಿಕೆಯ ಬಗ್ಗೆ ಸಾಕ್ಷರತೆ ಹಾಗೂ ವಿವಿಧ ಹೂಡಿಕೆಗಳಲ್ಲಿ ಹಣಕಾಸಿನ ತೊಡಗಿಸುವಿಕೆ ಬಗ್ಗೆ ಕಾರ್ಯಾಗಾರವನ್ನು ಏರ್ಪಡಿಸಲಾಯಿತು.

ಕಾರ್ಯಾಗಾರವನ್ನು ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಪ್ರೊಫೆಸರ್ ಪದ್ಮನಾಭ ಕೆ, ಉದ್ಘಾಟಿಸಿ ವಿದ್ಯಾರ್ಥಿಗಳು ಸಣ್ಣ ವಯಸ್ಸಿನಲ್ಲಿ ಉಳಿತಾಯ ಮಾಡುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಫ್ರಾಂಕ್ಲಿನ್ ಟೆಂಬಲ್ಟನ್ ಸಂಸ್ಥೆಯ ವ್ಯವಸ್ಥಾಪಕ ಲಿಯೋ ಅಮಲ್ ಇವರು ಸಣ್ಣ ಸಣ್ಣ ಉಳಿತಾಯಗಳಿಗೆ ಇರುವ ಬೇರೆ ಬೇರೆ ಹೂಡಿಕೆಗಳು ಮತ್ತು ಷೇರು ಮಾರುಕಟ್ಟೆಗಳಲ್ಲಿ ಹೂಡಿಕೆ ಮಾಡುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಕಾರ್ಯಾಗಾರದ ಮುಖಾಂತರ ಅರಿವು ಮೂಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಸುರೇಶ್ ವಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾರ್ಯಗಾರದ ಸಂಯೋಜಕರು ಹಾಗೂ ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ. ರವಿ ಎಂ ಎನ್, ಐಕ್ಯುಎಸಿ ಸಂಚಾಲಕರಾದ ಡಾ. ಕುಶಾಲಪ್ಪ ಎಸ್. ಪ್ಲೇಸ್ಮೆಂಟ್ ಅಧಿಕಾರಿಗಳಾದ ಪ್ರೊಫೆಸರ್ ಕವಿತಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಾಣಿಜ್ಯ ಸಂಘದ ಸಂಯೋಜಕರಾದ ಪ್ರೊಫೆಸರ್ ನವೀನ್ ಸ್ವಾಗತಿಸಿ ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ರಶ್ಮಿ ಎಚ್ ವಂದಿಸಿದರು.
ದ್ವಿತೀಯ ಬಿಕಾಂನ ಕುಮಾರಿ ರಕ್ಷಿತಾ ಹಾಗೂ ದ್ವಿತೀಯ ಬಿಬಿಎ ಕುಮಾರಿ ವೀಕ್ಷಿತ ಕಾರ್ಯಕ್ರಮ ನಿರೂಪಿಸಿದರು. ದ್ವಿತೀಯ ಬಿಎ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.