ಕಳೆಂಜ ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ 2024- 25ನೇ ಸಾಲಿನ ವಿಶೇಷಚೇತನರ ಸಮನ್ವಯ ಗ್ರಾಮಸಭೆಯನ್ನು ಫೆ.24 ರಂದು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ವಿಶ್ವನಾಥ ಹೆಚ್ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

2024 – 25ನೇ ಸಾಲಿನ ವಿಶೇಷಚೇತನರ ಕುರಿತಾದ ವಾರ್ಷಿಕ ವರದಿಯನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯಾದ ಶ್ರೀಮತಿ ವಿಮಲಾ ಎನ್ ವಾಚಿಸಿದರು.
ಸಭೆಯಲ್ಲಿ ಬೆಳ್ತಂಗಡಿ ತಾಲ್ಲೂಕು ವಿಶೇಷಚೇತನರ ವಿವಿಧೋದ್ದೇಶ ಪುನರ್ವಸತಿ ಸಂಯೋಜಕ ಜೋನ್ ಬ್ಯಾಪ್ಟಿಸ್ಟ್ ಡಿಸೋಜ ಇವರು ಉಪಸ್ಥಿತರಿದ್ದು ವಿಶೇಷಚೇತನರಿಗೆ ಸರಕಾರದಿಂದ ಹಾಗೂ ಗ್ರಾಮ ಪಂಚಾಯತ್ ನಿಂದ ಸಿಗುವ ಸೌಲಭ್ಯಗಳ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿದರು.

ಪ್ರಾಥಮಿಕ ಆರೋಗ್ಯ ಕೇಂದ್ರ ಹತ್ಯಡ್ಕ ಇವರ ಸಹಯೋಗದಲ್ಲಿ ವಿಶೇಷಚೇತನರಿಗೆ ಹಾಗೂ ಗ್ರಾಮಸ್ಥರಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಸುಮಾರು 60 ಮಂದಿ ಆರೋಗ್ಯ ಶಿಬಿರದ ಸದುಪಯೋಗವನ್ನು ಪಡೆದುಕೊಂಡರು.
ಸಭೆಯಲ್ಲಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರು, ಸದಸ್ಯರು, ಆರೋಗ್ಯ ಸಹಾಯಕಿ, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ, ಎಂ ಬಿ ಕೆ, ವಿಶೇಷಚೇತನರು ಮತ್ತು ಪೋಷಕರು ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪಂ. ಅಭಿವೃದ್ಧಿ ಅಧಿಕಾರಿ ಶ್ರೀಮತಿ ಹೊನ್ನಮ್ಮ ನಿರೂಪಿಸಿ, ಸ್ವಾಗತಿಸಿದರು. ವಿ ಆರ್ ಡಬ್ಲ್ಯೂ ಶ್ರೀಮತಿ ವಿಮಲಾ ಎನ್ ಧನ್ಯವಾದವಿತ್ತರು.