23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾರ್ಯ, ತೆಕ್ಕಾರು ಪುತ್ತಿಲ ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

ತೆಕ್ಕಾರು : ದೇಯಿ ಬೈದೆದಿ ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಮಾರ್ಚ್ 1 ರಿಂದ ಮಾರ್ಚ್ 5ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವವನ್ನು ಯಶಸ್ಸುಗೊಳಿಸುವ ಬಗ್ಗೆ ಬೆಳ್ತಂಗಡಿ ತಾಲೂಕಿನ ಬಾರ್ಯ ತೆಕ್ಕಾರು ಪುತ್ತಿಲ ಗ್ರಾಮಗಳ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಭಕ್ತಾಭಿಮಾನಿಗಳ ಸಮಾಲೋಚನ ಸಭೆಯನ್ನು ಶ್ರೀ ಕೊರಗಜ್ಜ ಕ್ಷೇತ್ರ ಮುಜ್ಜಾಲೆ ಬಾರ್ಯ ಇಲ್ಲಿ ಆಯೋಜಿಸಲಾಗಿತ್ತು.


ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಶ್ರೀ ಗುರುನಾರಾಯಣ ಸೇವಾ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ ಜಯ ವಿಕ್ರಂ ಕಲ್ಲಾಪು ರವರು ಕ್ಷೇತ್ರದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಿತಿಯ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ರವರು ಶ್ರೀ ಕ್ಷೇತ್ರದಲ್ಲಿ ನಡೆಯುವ ಮಡಿಲು ಸೇವೆ ಹಾಗೂ ಉತ್ಸವದ ಮಾಹಿತಿಯನ್ನು ಸಭೆಗೆ ನೀಡಿ ತಾಲೂಕಿನ ಎಲ್ಲಾ ಭಕ್ತಾಭಿಮಾನಿಗಳನ್ನು ಜಾತ್ರೋತ್ಸವಕ್ಕೆ ಆಮಂತ್ರಿಸಿದರು .


ಶ್ರೀ ಕ್ಷೇತ್ರ ಗೆಜ್ಜೆಗಿರಿ ಇಲ್ಲಿನ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ಡಾ. ರಾಜಾರಾಮ್, ಗ್ರಾಮ ಸಮಿತಿ ಅಧ್ಯಕ್ಷರುಗಳಾದ ಶೇಷಪ್ಪ ಸಾಲಿಯನ್ ಬರ್ಯಾ ಗುತ್ತು ,ದಿನೇಶ್ ಸುಣ್ಣಾಜೆ, ಗುರುನಾರಾಯಣ ಸೇವಾ ಸಂಘ ಬೆಳ್ತಂಗಡಿ ಇದರ ನಿರ್ದೇಶಕರಾದ ಗುಣಕರ ಅಗ್ನಾಡಿ, ಕೃಷ್ಣಪ್ಪ ಪೈಂದಗುತ್ತು, ವಿಶ್ವನಾಥ್ ಸುನ್ನಾಜೆ, ದಿನಕರ್ ಮುಜ್ಜಾಲೆ ,ಚಿದಾನಂದ ಪೋಸ್ಟ್ ಮಾಸ್ಟರ್, ಶ್ರೀಧರ, ಅರುಣ ಬಜಕ್ಕಲ, ಪ್ರವೀಣ್ ಬಜಕ್ಕಲ, ಕಿಶೋರ್ ಚಂದ್ರ, ಕರುಣಾಕರ, ಗುಣಕರ ಮುಗ್ಗ, ಧನುಷ್, ಪ್ರವೀಣ್ ಬಂಗೇರ, ಪುನೀತ್, ಜಿತೇಶ್ ಹರೀಶ್ ಪೇಲತ್ತಾಜೇ ,ಪ್ರಿತೇಶ್, ಸ್ನೇಹ ಕಿಶೋರ್, ಶ್ವೇತಾ ದಿನೇಶ್, ವಿಮಲಾ ಸುಣ್ಣಜೆ, ಸಂಧ್ಯಾ ಗುಣಕರ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹೇಮಾವತಿ, ಸ್ವಾತಿ, ವೇದಾವತಿ ದಿನಕರ್, ಹಾಗೂ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಹಲವಾರು ಭಕ್ತಾಭಿಮಾನಿಗಳು ಸೇರಿದ್ದರು,


ಶ್ರೀ ಕ್ಷೇತ್ರ ಗೆಜ್ಜೆಗಿರಿ ಕಣಿಯೂರು ವಲಯ ಸಂಚಾಲಕರೂ, ಶ್ರೀ ಗುರುನಾರಾಯಣ ಸೇವಾ ಸಂಘ ಬೆಳ್ತಂಗಡಿ ಇದರ ನಿರ್ದೇಶಕಿ ಶ್ರೀಮತಿ ಉಷಾ ಶರತ್ ರವರು ಕಾರ್ಯಕ್ರಮವನ್ನು ಸಂಘಟಿಸಿ ಬಂದ ಅತಿಥಿಗಳನ್ನು ಸ್ವಾಗತಿಸಿದರು. ಗುರು ನಾರಾಯಣ ಸೇವಾ ಸಂಘದ ನಿರ್ದೇಶಕರಾದ ಗುಣಕರ ಅಗ್ನಾಡಿ ಯವರ ಧನ್ಯವಾದವಿತ್ತರು.

Related posts

ಡಿ 19 :ಉಜಿರೆ  ಗ್ರಾ.ಪಂ.ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಉಜಿರೆ: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಉಜಿರೆ ಅನುಗ್ರಹದಲ್ಲಿ ನವೀಕೃತಗೊಂಡ ಪೂರ್ವ ಪ್ರಾಥಮಿಕ ತರಗತಿ ಹಾಗೂ ಒಳಾಂಗಣ ಆಟದ ಮನೆಯ ಉದ್ಘಾಟನೆ

Suddi Udaya

ಹರಿದ್ವಾರದಲ್ಲಿ ಗಂಗಾ ಮಾತೆಗೆ ಪೂಜೆ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಅಳದಂಗಡಿಯ ನಿಯತಿ ಯು. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿಯಿಂದ ಆದ ಹೊಸ ಶಸ್ತ್ರಚಿಕಿತ್ಸಾ ಕೊಠಡಿ ಪ್ರಾರಂಭ

Suddi Udaya
error: Content is protected !!