February 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

ಮರೋಡಿ ಗ್ರಾಮ ಪಂಚಾಯತ್ 2024-25ನೇ ಸಾಲಿನ ವಿಶೇಷಚೇತನರ ಸಮನ್ವಯ ಗ್ರಾಮ ಸಭೆಯು ಫೆ.18 ರಂದು ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷ ರತ್ನಾಕರ ಬುಣ್ಣನ್ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

2024-25ನೇ ಸಾಲಿನ ವಿಕಲಚೇತನರ ವಾರ್ಷಿಕ ವರದಿಯನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ದಿವ್ಯ. ಎನ್ ಇವರಿಗೆ ವೈಯಕ್ತಿಕ ಸಮಸ್ಯೆ ಇದ್ದಕಾರಣ ಅಭಿವೃದ್ಧಿ ಅಧಿಕಾರಿಯವರೇ ವಾಚಿಸಿದರು.
ವಿಕಲಚೇತನರಿಗೆ ಸಿಗುವ ಸರಕಾರದ ಸೌಲಭ್ಯದ ಸಮಗ್ರ ಮಾಹಿತಿ ಮತ್ತು ಪಂಚಾಯತಿಯಿಂದ ವಿಕಲಚೇತನರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಭಾಗವಹಿಸಿದ ಪಂಚಾಯತ್ ನ ಅಧ್ಯಕ್ಷರು ವಿಶೇಷಚೇತನರಿಗೆ ಹಿತನುಡಿಯನ್ನು ತಿಳಿಸಿದರು. ಸಭೆಯಲ್ಲಿ ಶಾಲಾ ಮುಖ್ಯ ಶಿಕ್ಷಕರು,ಆಶಾ ಕಾರ್ಯಕರ್ತರು, ಸಂಜೀವಿನಿ ಸಂಘದ ಎಮ್ ಬಿಕೆ ಯವರು, ಗ್ರಂಥಾಲಯ ಮೇಲ್ವಿಚಾರಕರು ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.


ಶಾಲಾ ಮುಖ್ಯ ಶಿಕ್ಷಕರು ವಿಶೇಷ ಚೇತನರಿಗೆ ವಿವಿಧ ಆಟೋಟ ಸ್ಪರ್ಧೆ ಗಳನ್ನು ನಡೆಸಿದರು, ಸ್ಪರ್ಧೆ ಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ನೀಡಲಾಯಿತು.

ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಆಶಾಲತಾ ಹೆಚ್ ನಿರೂಪಿಸಿ, ಸ್ವಾಗತಿಸಿ, ಧನ್ಯವಾದವಿತ್ತರು.

Related posts

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಇವರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮರೋಡಿ ಕ್ಷೇತ್ರ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Suddi Udaya

ಉಜಿರೆ: ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ

Suddi Udaya

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ. ಮಾಲಾಡಿ ಗ್ರಾ.ಪಂ.ಗೆ ಭೇಟಿ

Suddi Udaya

ಸುಲ್ಕೇರಿ ಗ್ರಾಮಸಭೆ: ಮಳೆ ಪ್ರಾರಂಭಕ್ಕಿಂತ ಮುಂಚೆ ನಾವರ ರಸ್ತೆ ಕಾಮಗಾರಿ ಪ್ರಾರಂಭಿಸಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನೂತನ ಸಮಿತಿ ಪದಗ್ರಹಣ

Suddi Udaya
error: Content is protected !!