32.3 C
ಪುತ್ತೂರು, ಬೆಳ್ತಂಗಡಿ
May 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ಹೈಕೋರ್ಟು ಆದೇಶ

ಕೊಕ್ಕಡ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಜ.27ರಂದು ನಡೆದ ಚುನಾವಣೆಯಲ್ಲಿ ತಡೆ ಹಿಡಿಯಲಾದ ಫಲಿತಾಂಶದ ಬಗ್ಗೆ ಹೈಕೋರ್ಟುನ ಅಂತಿಮ ತೀರ್ಪು ಪ್ರಕಟಗೊಂಡಿದ್ದು, ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.

ಈ ಹಿನ್ನಲೆಯಲ್ಲಿ ಮತದಾನದ ಅವಕಾಶ ಕಳೆದುಕೊಂಡ ಸಂಘದ ಸದಸ್ಯರು ಬೆಂಗಳೂರು ಉಚ್ಚನ್ಯಾಯಾಲಯದಲ್ಲಿ ಸಲ್ಲಿಸಿದ ರಿಟ್‌ಪಿಟಿಷನ್ ನ್ಯಾಯಾಲಯ ಎಲ್ಲ ಸದಸ್ಯರಿಗೂ ಮತದಾನಕ್ಕೆ ಅನುಮತಿ ನೀಡಿ, ಮುಂದಿನ ಆದೇಶವನ್ನು ಕಾಯ್ದಿರಿಸಿತ್ತು. ನ್ಯಾಯಾಯಲದ ಆದೇಶದಂತೆ ಮತದಾನಕ್ಕೆ ಅನುಮತಿ ಪಡೆದಿರುವ ಸದಸ್ಯರು ಮತ ಚಲಾಯಿಸಿದ್ದು ಆ ಮತಗಳನ್ನು ಪ್ರತ್ಯೇಕವಾಗಿ ನಿರ್ವಹಿಸಿ, ಅಭ್ಯರ್ಥಿ, ಏಜಂಟರ ಸಮ್ಮುಖದಲ್ಲಿ ಎಣಿಕೆಯನ್ನು ಮಾಡಲಾಗಿದೆ. ಇದೀಗ ಹೈಕೋರ್ಟು ನೀಡಿದ ಆದೇಶ ಬಂದ ಕೂಡಲೇ ಚುನಾವಣಾಧಿಕಾರಿ ಎನ್.ಜೆ. ಗೋಪಾಲ್ ಫಲಿತಾಂಶವನ್ನು ಘೋಷಣೆ ಮಾಡಿದ್ದಾರೆ.

ಚುನಾಯಿತರಾದ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಾದ ಪಿ. ಕುಶಾಲಪ್ಪ ಗೌಡ, ವಿಠಲ ಬಂಡಾರಿ, ಶ್ರೀನಾಥ ಬಿ., ಪದ್ಮನಾಭ ಕೆ., ಉದಯ ಎ., ಮಹಾಬಲ ಶೆಟ್ಟಿ, ಸುನಿಲ್, ರವಿಚಂದ್ರ ಪಿ., ಶ್ರೀಮತಿ ಪ್ರೇಮಾವತಿ, ಶ್ರೀಮತಿ ಅಶ್ವಿನಿ, ವಿಶ್ವನಾಥ, ಮುತ್ತಪ್ಪ ಜಯ ಗಳಿಸಿದ್ದಾರೆ.

Related posts

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಚಂದ್ರಶೇಖರ ಎಲ್. ಮತ್ತು ಮನೆಯವರಿಂದ ಸ್ಟೀಲ್ ತಟ್ಟೆ ಕೊಡುಗೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮತದಾನದ ಜಾಗೃತಿ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ವಿಶೇಷ ತರಬೇತಿ ದಿನಾಚರಣೆ

Suddi Udaya

ಅರಸಿನಮಕ್ಕಿಯಲ್ಲಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ಮರು ನಿರ್ಮಾಣ ಕಾರ್ಯ ನಡೆಯುತ್ತಿದ್ದು ಸ್ಥಳಕ್ಕೆ ಪುತ್ತೂರು ಮಾಸ್ಟರ್ ಪ್ಲಾನರಿಯವರಿಂದ ಭೇಟಿ

Suddi Udaya

ಉಜಿರೆ 45ನೇ ವರ್ಷದ ಶಾರದಾ ಪೂಜಾ ಸಮಿತಿ ನೂತನ ಸಮಿತಿ ರಚನೆ

Suddi Udaya
error: Content is protected !!