20.8 C
ಪುತ್ತೂರು, ಬೆಳ್ತಂಗಡಿ
March 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳ: ಪಾದಯಾತ್ರಿಗಳಿಗೆ ಸನ್ಮಾನ

ಧರ್ಮಸ್ಥಳ: ಪಾದಯಾತ್ರಿಗಳಿಗೆ ಸನ್ಮಾನಪರಿಶುದ್ಧವಾದ ಭಕ್ತಿ ಮತ್ತು ದೃಢನಂಬಿಕೆಯಿAದ ನಮ್ಮ ಎಲ್ಲಾ ಲೌಕಿಕ ಕಷ್ಟಗಳು, ಸಮಸ್ಯೆಗಳು ಪರಿಹಾರವಾಗಿ ನಾವು ದೇವರ ಅನುಗ್ರಹಕ್ಕೆ  ಪಾತ್ರರಾಗುತ್ತೇವೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಫೆ.25ರಂದು ಧರ್ಮಸ್ಥಳದಲ್ಲಿ ಪ್ರವಚನಮಂಟಪದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಶಿವರಾತ್ರಿ ಜಾಗರಣೆಗೆ ಪಾದಯಾತ್ರೆಯಲ್ಲಿ ಬಂದ ಭಕ್ತಾದಿಗಳಿಗೆ ಶುಭಹಾರೈಸಿ, ಆಶೀರ್ವದಿಸಿದರು.


ದೇವರಲ್ಲಿ ಭಕ್ತಿ ಮತ್ತು ನಂಬಿಕೆಯಲ್ಲಿ ಯಾವುದೇ ರೀತಿಯ ಭಯ, ಸಂಶಯ ಇರಬಾರದು. ನಾವು ಕೊಂಚ ತಪ್ಪಿದರೂ ದೇವರು ನಮ್ಮ ರಕ್ಷಣೆ ಮಾಡುತ್ತಾರೆ. ನಂಬಿಕೆಗಳು ಮತ್ತು ವಿಶ್ವಾಸದಿಂದ ನಮ್ಮ ದೋಷಗಳ ದಮನವಾಗುತ್ತದೆ. ಭಕ್ತಿಯಲ್ಲಿ ದೈಹಿಕ ಶಕ್ತಿಗಿಂತಲೂ ಮಾನಸಿಕ ಶಕ್ತಿ, ಸಂಕಲ್ಪ ಮಿಗಿಲಾದುದು.


ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ ಮಾಣಿಕ್ಯವಾಗಬೇಕು. ಎಲ್ಲಗೂ ಸತ್ಯ, ಧರ್ಮ, ನ್ಯಾಯ, ನೀತಿಯ ಮಾರ್ಗದಲ್ಲಿ ನಡೆದಾಗ ಜೀವನ ಪಾವನಾಗುತ್ತದೆ. ನಂಬಿದವರಿಗೆ ಇಂಬು ಕೊಡುವ ಧರ್ಮಸ್ಥಳದಲ್ಲಿ ಸತ್ಯ ಮತ್ತು ನ್ಯಾಯಮಾರ್ಗದಲ್ಲಿ ನಡೆದರೆ ಅವರಿಗೆ ದೇವರ ಪೂರ್ಣ ಅನುಗ್ರಹವಿರುತ್ತದೆ. ತ್ಯಾಗ ಮಾಡುವುದರಿಂದ ನಾವು ಶಾಶ್ವತ ಸುಖ-ಶಾಂತಿ, ನೆಮ್ಮದಿ ಪಡೆಯಬಹುದು ಎಂದು ಹೆಗ್ಗಡೆಯವರು ಹೇಳಿ, ಪಾದಯಾತ್ರಿಗಳಿಗೆ ಶುಭ ಹಾರೈಸಿದರು.


ಪಾದಯಾತ್ರಿಗಳಿಗೆ ನಿರಂತರ ಪ್ರೇರಣೆ, ಮಾರ್ಗದರ್ಶನ ನೀಡುತ್ತಿರುವ ಬೆಂಗಳೂರಿನ ಗುರು ಹನುಮಂತಪ್ಪ ಸ್ವಾಮೀಜಿ ಮತ್ತು ಬಳಗದವರನ್ನು ಹೆಗ್ಗಡೆಯವರು ಅಭಿನಂದಿಸಿದರು.
ನಾಗಸಾಧು ಧನಂಜಯ ಗಿರಿ ಗುರೂಜಿ, ಧರ್ಮಸ್ಥಳ ಕ್ಷೇತ್ರದ ಬಗ್ಯೆ ಅಪಾರ ಭಕ್ತಿ, ಗೌರವ ವ್ಯಕ್ತಪಡಿಸಿ ಗರ್ಭಗುಡಿಯಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನವಾದರೆ, ನಾವು ಹೊರಗೆ ಬಂದು ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಮಾತನಾಡುವ ಮಂಜುನಾಥನ ದರ್ಶನ, ಆಶೀರ್ವಾದ ಪಡೆದು ಪುನೀತರಾಗುತ್ತೇವೆ. ಹೆಗ್ಗಡೆಯವರ ಮೂಲಕ ನಾವು ಶ್ರೀ  ಸ್ವಾಮಿಯ ಅನುಗ್ರಹಕ್ಕೆ ಪಾತ್ರರಾಗುತ್ತೇವೆ ಎಂದರು.


ಸ್ವಚ್ಛತೆಯನ್ನು ಕಾಪಾಡಿ: ಪವಿತ್ರ ಕ್ಷೇತ್ರ ಧರ್ಮಸ್ಥಳಕ್ಕೆ ಬಂದವರು ನೇತ್ರಾವತಿ ನದಿಯಲ್ಲಿ ಮಿಂದು ಬಟ್ಟೆ, ಸಾಬೂನು, ತ್ಯಾಜ್ಯಗಳನ್ನು ನೀರಿಗೆ ಹಾಕಿ ಅಪವಿತ್ರ ಮಾಡಬಾರದು. ಇದರಿಂದ ಪಾಪಪ್ರಜ್ಞೆ ಹೆಚ್ಚಾಗುತ್ತದೆ ಎಂದು ಅವರು ಭಕ್ತರಿಗೆ ಎಚ್ಚರಿಕೆ ನೀಡಿದರು.
ಶಿವಕ್ಷೇತ್ರ ಯಾವಗಲೂ ಶಾಂತವಾಗಿದ್ದು, ಪವಿತ್ರ ಧರ್ಮಸ್ಥಳವನ್ನು ಹಾಗೂ ನೇತ್ರಾವತಿ ನದಿಯನ್ನು ಸ್ವಚ್ಛವಾಗಿಡಲು ಸಹಕರಿಸಿ. ಧರ್ಮಸ್ಥಳದ ಅನ್ನದಾನ ವಿಶ್ವವಿಖ್ಯಾತವಾಗಿದೆ. ಭಕ್ತರು ಕೂಡಾ ಈ  ಪವಿತ್ರ ಕಾಯಕಕ್ಕೆ ದಾನ ನೀಡಬಹುದು ಎಂದರು.
ಪಾದಯಾತ್ರೆಯ ರೂವಾರಿ ಹನುಮಂತಪ್ಪ ಗುರೂಜಿ ಶುಭ ಹಾರೈಸಿದರು. ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಉಪಸ್ಥಿತರಿದ್ದು ಸಹಕರಿಸಿದರು. ಮರಿಯಪ್ಪ ಸ್ವಾಗತಿಸಿದರು. ಶಶಿಕುಮಾರ ಧನ್ಯವಾದವಿತ್ತರು.

Related posts

ಇಂದಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ

Suddi Udaya

ಉಜಿರೆಯಲ್ಲಿ ಫ್ಲೇಕ್ ಎನ್ ಪ್ಲೇಟ್ ಶುಭಾರಂಭ

Suddi Udaya

ಕಳೆಂಜ: ಅಕ್ರಮ ಗೋ ಸಾಗಾಟ: ಇಬ್ಬರ ಬಂಧನ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ ನಿಂದ ಬೆಂಬಲ

Suddi Udaya
error: Content is protected !!