March 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಷೇರು ಮಾರುಕಟ್ಟೆ ವಿಶ್ಲೇಷಣೆ” ಕುರಿತು ಮಾಹಿತಿ ಕಾರ್ಯಾಗಾರ

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜು ಇಲ್ಲಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳಿಗೆ ಷೇರು ಮಾರುಕಟ್ಟೆಯ ಜ್ಞಾನವು ಹಣಕಾಸನ್ನು ಹೇಗೆ ನಿರ್ವಹಿಸುವುದು ಹಾಗೂ ಸುರಕ್ಷಿತ ಭವಿಷ್ಯಕ್ಕಾಗಿ ಉತ್ತಮ ಹಣಕಾಸಿನ ಹೂಡಿಕೆಯ ನಿರ್ಧಾರಗಳನ್ನು ಹೇಗೆ ತೆಗೆದುಕೊಳ್ಳಬೇಕು ಎಂಬುವುದರ ಅರಿವು ಮೂಡಬೇಕು ಎಂಬ ನಿಟ್ಟಿನಲ್ಲಿ “ಷೇರು ಮಾರುಕಟ್ಟೆ ವಿಶ್ಲೇಷಣೆ” ಕುರಿತು ಮಾಹಿತಿ ಕಾರ್ಯಗಾರವು ಫೆ.25 ರಂದು ನಡೆಯಿತು.


ಈ ಕಾರ್ಯಗಾರವು ಎರಡು ಹಂತದಲ್ಲಿ ನಡೆಯಿತು. ಮೊದಲ ಹಂತದಲ್ಲಿ ಷೇರು ಮಾರುಕಟ್ಟೆ ಎಂದರೇನು ಮತ್ತು ಬಿಎಸ್‌ಇ ಮತ್ತು ಎನ್‌ಎಸ್‌ಇ ನ ಇತಿಹಾಸ, ಮೂಲಭೂತ ವಿಶ್ಲೇಷಣೆ ಮತ್ತು ತಾಂತ್ರಿಕ ವಿಶ್ಲೇಷಣೆಯನ್ನು ಒಳಗೊಂಡಿತ್ತು.
ಎರಡನೇಯ ಹಂತದಲ್ಲಿ ಪ್ರಾಯೋಗಿಕವಾಗಿ ಷೇರುಗಳನ್ನು ಹೇಗೆ ಖರೀದಿಸುವುದು, ಡಿಮೇಟ್ ಅಕಾಂಟ್, ಆರ್‌ಎಸ್‌ಐ ಮತ್ತು ಇತರ ತಾಂತ್ರಿಕ ಸಾಧನಗಳನ್ನು ಹೇಗೆ ತೆರೆಯುವುದು ಎಂಬುದನ್ನು ಒಳಗೊಂಡಿತ್ತು. ಸಂಸ್ಥೆಯ ಸಂಯೋಜಕರಾದ ಯಶವಂತ ಜಿ ನಾಯಕ್ ಇವರು ಮಾಹಿತಿ ಕಾರ್ಯಗಾರ ನಡೆಸಿಕೊಟ್ಟರು.


ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಪದವಿ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ.ಎ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿಂದ್ಯಾಶ್ರೀ. ಎ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ಕಾರ್ಯಾಗಾರವು ಯಶಸ್ವಿಯಾಗಿ ನಡೆಯಿತು.

Related posts

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಚಾರ್ಮಾಡಿ ಘಾಟ್ ವಿಸ್ತರಣೆಗೆ ರೂ. 343.73 ಕೋಟಿ ಬಿಡುಗಡೆ- ನಿತಿನ್ ಗಡ್ಕರಿ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಶ್ರಮದಾನ

Suddi Udaya

ಕೆ.ಪಿ.ಸಿ.ಸಿ ಉಪಾಧ್ಯಕ್ಷರಾಗಿ ಮಾಜಿ ಸಚಿವ ಗಂಗಾಧರ ಗೌಡ ಆಯ್ಕೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನವರ್ಷಾವಧಿ ಜಾತ್ರಾ ಮಹೋತ್ಸವ ಆರಂಭ

Suddi Udaya

ಪಿಯುಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ, ಸಹನ ಭಟ್ ರವರಿಗೆ ಸನ್ಮಾನ

Suddi Udaya
error: Content is protected !!