ಬಳಂಜ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ ಯನ್ನು ಫೆ.27 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು.
ಸಭೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶೋಭಾ ಮಾಧವ ಕುಲಾಲ್ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ತಾಲೂಕು ವಿಶೇಷ ಚೇತನರ ವಿವಿಧೋದ್ದೇಶ ಪುನರ್ವಸತಿ ಸಂಯೋಜಕರಾದ ಜೋನ್ ಬ್ಯಾಪ್ಟಿಸ್ ಡಿಸೋಜಾ ರವರು ಉಪಸ್ಥಿತರಿದ್ದು ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಸರಕಾರದಿಂದ ವಿಶೇಷ ಚೇತನರಿಗೆ ಸಿಗುವ ಎಲ್ಲಾ ಸೌಲಭ್ಯಗಳು ಕುರಿತು, ವಿದ್ಯಾಭ್ಯಾಸಕ್ಕೆ ಸಿಗುವ ಸೌಲಭ್ಯಗಳ ಬಗ್ಗೆ ಸಮಗ್ರವಾದ ಮಾಹಿತಿಯನ್ನು ನೀಡಿದರು. ಅಲ್ಲದೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ವಿನೋದ ರವರು ವಾರ್ಷಿಕ ವರದಿಯನ್ನು ಮಂಡಿಸಿದರು . ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಗ್ರಾಮ ಪಂಚಾಯತಿಯಿಂದ ಸಿಗುವ ಸೌಲಭ್ಯಗಳ ಕುರಿತಾಗಿ ಸಮಗ್ರವಾದ ಮಾಹಿತಿಯನ್ನು ನೀಡಿದರು . ಗ್ರಾಮ ಪಂಚಾಯತ್ ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪಂಚಾಯತ್ ಅಧ್ಯಕ್ಷರಿಂದ 36 ಫಲಾನುಭವಿಗಳಿಗೆ ಸ್ಟೀಲ್ ಡ್ರಮ್ ವಿತರಿಸಲಾಯಿತು . ಪಂ. ಗ್ರಂಥಪಾಲಕಿ ಸೌಮ್ಯಾ ರವರು ದಾಖಾಲಾತಿ ಗಳನ್ನು ಸಂಗ್ರಹಿಸಿದರು. ಪಂ. ಸಿಬ್ಬಂದಿಗಳು ಸಹಕರಿಸಿದರು.
ಒಕ್ಕೂಟದ ಎಂ ಬಿ ಕೆ ವಿಮಲಾ ರವರು ಸ್ವಾಗತಿಸಿದರು. ಪಂಚಾಯತ್ ಬಿಲ್ ಕಲೆಕ್ಟರ್ ಆನಂದ ನಾಯ್ಕ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.