April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ : ಕಲ್ಲಗುಡ್ಡೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಚ್ಚಿನ ಬ್ರಾಂಚ್ ಸಮಿತಿ ನೇತೃತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ಮಚ್ಚಿನ ಗ್ರಾಮದ ಕಲ್ಲಗುಡ್ಡೆಯಲ್ಲಿ ನಿರ್ಮಿಸಿದ ಮನೆಯನ್ನು ಕಣಿಯೂರು ಬ್ಲಾಕ್ ಅಧ್ಯಕ್ಷ ಮುಸ್ತಫಾ ಬಂಗೇರಕಟ್ಟೆ ಅವರ ಸಮ್ಮುಖದಲ್ಲಿ ಬಡ ಮಹಿಳೆಗೆ ಹಸ್ತಾಂತರ ಮಾಡಲಾಯಿತು.

ಬದ್ರಿಯಾ ಜುಮ್ಮಾ ಮಸೀದಿ ಬಂಗೇರಕಟ್ಟೆ ಖತೀಬರಾದ ಸಲ್ಮಾನ್ ಅನ್ಸಾರಿ ಅವರು ದುವಾ ಆಶಿರ್ವಾದಗೈದರು. ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಉದ್ಘಾಟನೆ ಮಾಡಿದರು. ಎಸ್‌ಡಿಪಿಐ ದ.ಕ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜಾತ್ತೂರು ಮನೆ ಕೀ ಕುಟುಂಬ ಸದಸ್ಯರಿಗೆ ಹಸ್ತಾಂತರ ಮಾಡಿದರು. ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಜಿಲ್ಲಾ ಸಮಿತಿ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಉಪಾಧ್ಯಕ್ಷರಾದ ನಿಸಾರ್ ಕುದ್ರಡ್ಕ, ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಹನೀಫ್ ಟಿ. ಎಸ್, ಹಕೀಮ್, ಇಕ್ಬಾಲ್ ಬಳ್ಳಮಂಜ, ಎಸ್‌ಡಿಪಿಐ ಪಕ್ಷದ ಕಾರ್ಯಕರ್ತರು ಹಾಗೂ ಜಮಾತ್ ಬಾಂಧವರು ಉಪಸ್ಥಿತರಿದ್ದರು.

Related posts

ಕನ್ಯಾಡಿ ಶ್ರೀ ರಾಮಕ್ಷೇತ್ರಕ್ಕೆ ಧರ್ಮಸ್ಥಳ ಗ್ರಾಮದ ಭಕ್ತರಿಂದ ಹೊರೆಕಾಣಿಕೆ ಪ್ರಯುಕ್ತ ಅಕ್ಕಿ ಸಮರ್ಪಣೆ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಿಗೆ ಸನ್ಮಾನ

Suddi Udaya

ಧರ್ಮಸ್ಥಳದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ “ನೆನಪುಗಳ ನೇವರಿಕೆ” ಪುಸ್ತಕ ಬಿಡುಗಡೆ

Suddi Udaya

ನಿಡ್ಲೆ : ಅಗ್ರಿಲೀಫ್ ಎಕ್ಸ್‌ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಅಂತರಾಷ್ಟ್ರೀಯ ಮನ್ನಣೆ

Suddi Udaya

ಪಟ್ರಮೆ: ಪಾದೆಯಲ್ಲಿ ಧರೆ ಕುಸಿತ: ಮನೆಗೆ ಹಾನಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya
error: Content is protected !!