ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟುವಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಫೆ. 28 ರಂದು ಆಚರಿಸಲಾಯಿತು.
ಕಾರ್ಯಕ್ರಮದ ಪ್ರಯುಕ್ತ ನಡೆದ ‘ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗಳ ಪ್ರದರ್ಶನ’ ವನ್ನು ಎಸ್ ಡಿ ಎಮ್ ಶಿಕ್ಷಕರ ತರಬೇತಿ ಸಂಸ್ಥೆ , ಉಜಿರೆ ಇಲ್ಲಿನ ಸಹಾಯಕ ಪ್ರಾಧ್ಯಾಪಕ ಮಂಜು ಆರ್ ಉದ್ಘಾಟಿಸಿ ಮಾತನಾಡಿ ‘ವಿದ್ಯಾರ್ಥಿಗಳಿಗೆ ದಿನನಿತ್ಯದಲ್ಲಿ ವಿಜ್ಞಾನ , ವಿಜ್ಞಾನದ ಕೌತುಕಗಳು , ನವೀನ ಆವಿಷ್ಕಾರಗಳು ಹಾಗೂ ವೈಜ್ಞಾನಿಕ ಕ್ಷೇತ್ರದ ಅಭೂತಪೂರ್ವವಾದ ಬೆಳವಣಿಗೆಯ ಬಗ್ಗೆ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಶಾಲಾ ಮುಖ್ಯೋಪಾಧ್ಯಾಯರಾದ ಶೀನಪ್ಪಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ರಾಷ್ಟ್ರೀಯ ವಿಜ್ಞಾನ ದಿನದ ವೈಶಿಷ್ಟ್ಯತೆಗಳ ಬಗ್ಗೆ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು . ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗಾಗಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಬಗ್ಗೆ ಭಾಷಣವನ್ನು ಏರ್ಪಡಿಸಲಾಗಿತ್ತು.
ಶಿಕ್ಷಕ ಪವನ್ ಕುಮಾರ್ ಸ್ವಾಗತಿಸಿ, ಶಿಕ್ಷಕಿ ಕು| ಜಿತೀಕ್ಷ ರವರು ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಶ್ರೀಮತಿ ಶೀಲಾ.ಎನ್ ಧನ್ಯವಾದವಿತ್ತರು. ಶಾಲಾ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.