ಮಡಂತ್ಯಾರು: ಮಡಂತ್ಯಾರು ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ರೂಪ ಎ.ಎಸ್. ರವರ ಅಧ್ಯಕ್ಷತೆಯಲ್ಲಿ ಫೆ.28ರಂದು ಪಂಚಾಯತ್ ಸಭಾಭವನದಲ್ಲಿ ಜರುಗಿತು.
ಮಾರ್ಗದರ್ಶಕ ಅಧಿಕಾರಿಯಾಗಿ ಪಶುಸಂಗೋಪನೆ ಇಲಾಖೆಯ ಮುಖ್ಯ ವೈದ್ಯಾಧಿಕಾರಿ ಡಾ. ವಿನಯ್ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.
ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ದೆಹಲಿಯ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಭಾಗವಹಿಸಿದ ಸೇಕ್ರೆಡ್ ಹಾರ್ಟ್ ಕಾಲೇಜಿನ ವಿದ್ಯಾರ್ಥಿನಿ ಕು. ಯಶ್ವಿತಾ ರವರನ್ನು ಸನ್ಮಾನಿಸಲಾಯಿತು.
ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷ ಗೋಪಾಲಕೃಷ್ಣ ಕೆ., ಪಂಚಾಯತ್ ಸದಸ್ಯರುಗಳಾದ ಕಿಶೋರ್ ಕುಮಾರ್ ಶೆಟ್ಟಿ, ಶ್ರೀಮತಿ ಸಂಗೀತ ಶೆಟ್ಟಿ, ಶ್ರೀಮತಿ ಆಗ್ನೆಸ್ ಮೋನಿಸ್, ಶ್ರೀಮತಿ ಮೋಹಿನಿ, ಹರಿಪ್ರಸಾದ್ ಶೆಟ್ಟಿ, ಉಮೇಶ್ ಸುವರ್ಣ, ಹನೀಫ್, ಶ್ರೀಮತಿ ಸಾರಾಸನಫ್.ಯು.ವೈ, ಶ್ರೀಮತಿ ಪಾರ್ವತಿ, ಶೈಲೇಶ್ ಕುಮಾರ್, ರಾಜೀವ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಪಂಚಾಯತ್ ಸದಸ್ಯ ಶೈಲೇಶ್ ಪಿ. ಸ್ವಾಗತಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪರಮೇಶ್ವರ್ ವರದಿ ವಾಚಿಸಿದರು. ಸಿಬ್ಬಂದಿ ಶಮಿತ ನಿರೂಪಿಸಿದರು. ಗ್ರಾ.ಪಂ. ಶ್ರೀಮತಿ ಶೀಲಾವತಿ ವಂದಿಸಿದರು.