26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ: ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಮನವಿ

ಬೆಳ್ತಂಗಡಿ : ವಕೀಲರ ಸಂಘ (ರಿ ) ಬೆಳ್ತಂಗಡಿ ವತಿಯಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಬೆಳ್ತಂಗಡಿ ವಕೀಲರ ಭವನದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು . ಈ ಸಂದರ್ಭದಲ್ಲಿ ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದ ಕಟ್ಟಡ ನಿರ್ಮಾಣಕ್ಕೆ ಮನವಿಯನ್ನು ಸಲ್ಲಿಸಲಾಯಿತು ಮತ್ತು ವಕೀಲರ ಭವನದ ಕಟ್ಟಡಕ್ಕೆ ಲಿಫ್ಟಿನ ವ್ಯವಸ್ಥೆಯನ್ನು ಮಾಡುವಂತೆ ಮನವಿಯನ್ನು ನೀಡಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ವಹಿಸಿದ್ದರು, ವೇದಿಕೆಯಲ್ಲಿ ಹಿರಿಯ ಸಮಿತಿಯ ಅಧ್ಯಕ್ಷರಾದ ಅಲೋಸಿಸ್ ಎಸ್ ಲೋಬೊ, ಪ್ರಧಾನ ಕಾರ್ಯದರ್ಶಿಯಾದ ನವೀನ್ ಬಿ ಕೆ ಮತ್ತು ಉಪಾಧ್ಯಕ್ಷರಾದ ಅಶೋಕ ಕರಿಯನೆಲ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮನವಿಯನ್ನು ಹಿರಿಯ ವಕೀಲರಾದ ಬಿಕೆ ಧನಂಜಯ ರಾವ್ ರವರು ವಾಚಿಸಿದರು. ಸನ್ಮಾನ ಪತ್ರವನ್ನು ಅಲೋಸಿಯಸ್ ಎಸ್ ಲೋಬೋ ರವರು ವಾಚಿಸಿದರು.

ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯವಾದಿ ರಕ್ಷಿತ್ ಶಿವರಾಂ, ವಕೀಲರ ಸಂಘದ ಪದಾಧಿಕಾರಿಗಳು, ಹಿರಿಯ ಕಿರಿಯ ವಕೀಲರಗಳು, ಗಣ್ಯರು ಹಾಗೂ ಪತ್ರಿಕಾ ಮಾಧ್ಯಮದವರು ಉಪಸ್ಥಿರಿದ್ದರು.

ಕಾರ್ಯಕ್ರಮ ನಿರೂಪಣೆಯನ್ನು ವಕೀಲರಾದ ಸೇವಿಯರ್ ಪಾಲೆಲಿ ಹಾಗೂ ಧನ್ಯವಾದವನ್ನು ಅಸ್ಮ ನೆರವೇರಿಸಿದರು.

Related posts

ಕೊಕ್ಕಡ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ

Suddi Udaya
error: Content is protected !!