30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಮಡಂತ್ಯಾರು: ಮಡಂತ್ಯಾರು ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ರೂಪ ಎ.ಎಸ್. ರವರ ಅಧ್ಯಕ್ಷತೆಯಲ್ಲಿ ಫೆ.28ರಂದು ಪಂಚಾಯತ್ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಪಶುಸಂಗೋಪನೆ ಇಲಾಖೆಯ ಮುಖ್ಯ ವೈದ್ಯಾಧಿಕಾರಿ ಡಾ. ವಿನಯ್ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ದೆಹಲಿಯ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಭಾಗವಹಿಸಿದ ಸೇಕ್ರೆಡ್ ಹಾರ್ಟ್ ಕಾಲೇಜಿನ ವಿದ್ಯಾರ್ಥಿನಿ ಕು. ಯಶ್ವಿತಾ ರವರನ್ನು ಸನ್ಮಾನಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷ ಗೋಪಾಲಕೃಷ್ಣ ಕೆ., ಪಂಚಾಯತ್‌ ಸದಸ್ಯರುಗಳಾದ ಕಿಶೋರ್ ಕುಮಾರ್ ಶೆಟ್ಟಿ, ಶ್ರೀಮತಿ ಸಂಗೀತ ಶೆಟ್ಟಿ, ಶ್ರೀಮತಿ ಆಗ್ನೆಸ್ ಮೋನಿಸ್, ಶ್ರೀಮತಿ ಮೋಹಿನಿ, ಹರಿಪ್ರಸಾದ್ ಶೆಟ್ಟಿ, ಉಮೇಶ್ ಸುವರ್ಣ, ಹನೀಫ್, ಶ್ರೀಮತಿ ಸಾರಾಸನಫ್.ಯು.ವೈ, ಶ್ರೀಮತಿ ಪಾರ್ವತಿ, ಶೈಲೇಶ್ ಕುಮಾರ್, ರಾಜೀವ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಸದಸ್ಯ ಶೈಲೇಶ್ ಪಿ. ಸ್ವಾಗತಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪರಮೇಶ್ವರ್ ವರದಿ ವಾಚಿಸಿದರು. ಸಿಬ್ಬಂದಿ ಶಮಿತ ನಿರೂಪಿಸಿದರು. ಗ್ರಾ.ಪಂ. ಶ್ರೀಮತಿ ಶೀಲಾವತಿ ವಂದಿಸಿದರು.

Related posts

ಎಸ್.ಡಿ.ಎಂ ಪ.ಪೂ ಕಾಲೇಜಿನ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಸಂಯೋಜಕಿಯಾಗಿ ಅಂಜನಾ ಆಯ್ಕೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರ ಭೇಟಿ

Suddi Udaya

ಶ್ರೀ. ಧ. ಮಂ. ಪ. ಪೂ.ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ

Suddi Udaya

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮಲೆಕುಡಿಯರ ವಾರ್ಷಿಕ ಸಮಾವೇಶ

Suddi Udaya

ಗುರುವಾಯನಕೆರೆ ಹೋಟೆಲ್ ರೇಸ್ ಇನ್ ನ ಆಹಾರ ವಿಭಾಗವಾದ “ಪೆಗ್ಸ್ ರೆಸ್ಟೋ ಬಾರ್ & ಫ್ಯಾಮಿಲಿ ರೆಸ್ಟೋರೆಂಟ್” ಹೊಸ ಆಡಳಿತದೊಂದಿಗೆ ಶುಭಾರಂಭ

Suddi Udaya
error: Content is protected !!