21.6 C
ಪುತ್ತೂರು, ಬೆಳ್ತಂಗಡಿ
March 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಫೆ .28ರಂದು ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಕಮಲ್ ತೇಜ ರಜಪೂತ್ ರವರು ನಿರ್ವಹಿಸಿ ರಾಷ್ಟ್ರೀಯ ವಿಜ್ಞಾನ ದಿನದ ಬಗ್ಗೆ ಮಾತನಾಡಿದರು ಮತ್ತು ಭಾರತೀಯ ವಿಜ್ಞಾನಿಗಳ ಸಾಧನೆಗಳನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ವಿಜ್ಞಾನ ಶಿಕ್ಷಕ ಜೋಸೆಫ್ ರವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಶ್ರೀಮತಿ ಉಷಾ ,ಶ್ರೀ ಶೇಖರ್ ಗೌಡ., ಶ್ರೀಮತಿ ಕಾವ್ಯ ಇವರು ಆಧುನಿಕ ಯುಗದಲ್ಲಿ ವಿಜ್ಞಾನದ ಮಹತ್ವ ಮತ್ತು ವಿಜ್ಞಾನ ದಿನಾಚರಣೆಯನ್ನು ಆಚರಿಸಬೇಕಾದಂತಹ ಅವಶ್ಯಕತೆಗಳ ಬಗ್ಗೆ ವಿವರಣೆಯನ್ನು ನೀಡಿದರು. 6 ಮತ್ತು 7 ನೇ ತರಗತಿ ವಿದ್ಯಾರ್ಥಿಗಳು ವಿಜ್ಞಾನ ಮಾದರಿಗಳನ್ನು ತಾವೇ ತಯಾರಿಸಿ ಪ್ರದರ್ಶನದಲ್ಲಿ ಭಾಗವಹಿಸಿ ವಿವರಣೆಗಳನ್ನು ನೀಡಿದರು .

ಕಾರ್ಯಕ್ರಮವನ್ನು ಶಿಕ್ಷಕಿ ಕೇಶವತಿ ನಿರ್ವಹಿಸಿ, ಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿ , ಶಿಕ್ಷಕಿ ಪೂರ್ಣಿಮಾ ಕೆ. ಎಂ ವಂದಿಸಿದರು.

Related posts

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಪೌರ ಕಾರ್ಮಿಕರು

Suddi Udaya

ವಿದ್ವತ್ ಭರವಸೆ: ಪ್ರತಿಭಾನ್ವಿತರಿಗೆ ಉಚಿತ ಶಿಕ್ಷಣ

Suddi Udaya

ವೇಣೂರು: ಅಕ್ರಮವಾಗಿ ಗಾಂಜಾ ಸಾಗಾಟ,ಆರೋಪಿ ಬಂಧನಮೋಟಾರ್ ಸೈಕಲ್ ಹಾಗೂ ರೂ. 37 ಸಾವಿರದ 500 ಗ್ರಾಂ ಗಾಂಜಾ ವಶ ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಕನ್ಯಾಡಿ ಸರಕಾರಿ ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಜು.25: ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ

Suddi Udaya

ರೂ. 35 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪಟ್ಟಣ ಪಂಚಾಯತ್ ಕಛೇರಿ ವಿಸ್ತ್ರತ ಕಟ್ಟಡದ ಸಭಾಂಗಣ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya
error: Content is protected !!