32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

ಹೊಸಂಗಡಿ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆಯು ಫೆ. 28 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು.

ಸಭೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.


ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಸ್ವಾಗತಿಸಿ, ಸರಕಾರದಿಂದ ಹಾಗೂ ಗ್ರಾಮ ಪಂಚಾಯತ್ ನಿಂದ ವಿಶೇಷ ಚೇತನರಿಗೆ ಸಿಗುವ ಎಲ್ಲಾ ಸೌಲಭ್ಯಗಳು ಕುರಿತು, ಸಮಗ್ರವಾದ ಮಾಹಿತಿಯನ್ನು ನೀಡಿದರು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯಾದ ಶ್ರೀಮತಿ ಸೌಮ್ಯ ರವರು ವಾರ್ಷಿಕ ವರದಿಯನ್ನು ಮಂಡಿಸಿದರು. ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ರಹಿಮಾನ್, ಕರುಣಾಕರ, ಪ್ರಕಾಶ್, ಶ್ರೀಮತಿ ನಾಗರತ್ನ , ಶ್ರೀಮತಿ ಪ್ರಮೀಳಾ ರವರು ವೇದಿಕೆ ಯಲ್ಲಿ ಉಪಸ್ಥಿತರಿದ್ದರು.

ಸೇರಿರುವ ಫಲಾನುಭವಿಗಳಿಂದ ಬೇಡಿಕೆಗಳನ್ನು ಸ್ವೀಕರಿಸಲಾಯಿತು. ಹಾಗೂ ಪಂಚಾಯತ್ ಅಧ್ಯಕ್ಷರಿಂದ 16 ಫಲಾನುಭವಿಗಳಿಗೆ ಅಗತ್ಯ ಸಾಮಗ್ರಿಗಳನ್ನು ವಿತರಿಸಲಾಯಿತು, ಪಂಚಾಯತ್ ನ ಸಿಬ್ಬಂದಿಗಳು ಸಹಕರಿಸಿದರು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯಾದ ಶ್ರೀಮತಿ ಸೌಮ್ಯ ಧನ್ಯವಾದವಿತ್ತರು.

Related posts

ಮಚ್ಚಿನ ಸ. ಪ್ರೌ. ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಉಚಿತ ಪುಸ್ತಕ ವಿತರಣೆ

Suddi Udaya

ಅ.3-8: ಕೊಪ್ಪದಲ್ಲಿ 45ನೇ ಬೃಹತ್ ದಸರಾ ಯೋಗ ಕಾರ್ಯಕ್ರಮ, ಪೂರ್ವಭಾವಿ ಸಭೆ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ಸಭೆ

Suddi Udaya

ಎ.2: ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ, ವಿವಿಧ ಮೋರ್ಚಾಗಳ, ಮಹಾಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಸಮಿತಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪರಿಸರ ದಿನಾಚರಣೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!