25.7 C
ಪುತ್ತೂರು, ಬೆಳ್ತಂಗಡಿ
April 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿಯಲ್ಲಿ ಫೆ.28 ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು.

ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಗೌಡ ಕೆ. ಅಲಂಕರಿಸಿದರು. ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿಗಳಾದ ಜಯರಾಜ್ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿಜ್ಞಾನ ದಿನದ ಪ್ರತಿಜ್ಞೆಯನ್ನು ಬೋಧಿಸಿ, ವಿಜ್ಞಾನ ಮತ್ತು ಗಣಿತ ಜೀವನದಲ್ಲಿ ಹೇಗೆ ಹಾಸುಹೊಕ್ಕಾಗಿದೆ ಎಂದು ಕಥೆಯ ಮೂಲಕ ವಿವರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಪಂಚಾಯತ್ ನ ಸಿಬ್ಬಂದಿಗಳಾದ ಶ್ರೀಮತಿ ವಿಂಧ್ಯಾ, ಉಮೇಶ್, ಗ್ರಂಥಾಲಯ ಪಾಲಕಿ ಶ್ರೀಮತಿ ಮಮತಾ ವೇದಿಕೆಯಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾರ್ಥಿಗಳು ವಿಜ್ಞಾನದ ವಿವಿಧ ಮಾದರಿಗಳನ್ನು ಉತ್ತಮವಾಗಿ ಪ್ರದರ್ಶಿದರು. ಶಿಕ್ಷಕಿಯರಾದ ದಿವ್ಯಶ್ರೀ, ವಿದ್ಯಾಲಕ್ಷ್ಮಿ ಹೇಮಾವತಿ, ಸಂಧ್ಯಾ, ಸ್ವಾತಿ ಯವರು ವಿದ್ಯಾರ್ಥಿಗಳಿಗೆ ಸೂಕ್ತ ಸಲಹೆ ಸೂಚನೆ ನೀಡಿದರು.

Related posts

ದ್ವಿತೀಯ ಪಿಯುಸಿ ಫಲಿತಾಂಶ: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಪೂರ್ವಿಕ ಸಿ ರವರಿಗೆ ಅತ್ಯುತ್ತಮ ಶ್ರೇಣಿ

Suddi Udaya

ಪಿಯುಸಿ ಯಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಪಡೆದಿದ್ದ ಆಕರ್ಶ್ ಪಿಎಸ್ ಗೆ ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ

Suddi Udaya

ಕಳೆಂಜ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’ ಕಾರ್ಯಕ್ರಮಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ

Suddi Udaya

ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya

ಧರ್ಮಸ್ಥಳ, ವೇಣೂರು, ಬೆಳ್ತಂಗಡಿ ನಕ್ಸಲ್ ಪ್ರಕರಣ: ನಕ್ಸಲ್ ಬಿ.ಜಿ.ಕೃಷ್ಣಮೂರ್ತಿ, ಸಾವಿತ್ರಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಕಡಿರುದ್ಯಾವರ ಗ್ರಾ.ಪಂ.ನಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya
error: Content is protected !!