25.6 C
ಪುತ್ತೂರು, ಬೆಳ್ತಂಗಡಿ
March 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ವಿಜ್ಞಾನ ಸಂಘದ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನವನ್ನು ಬಹಳ ವಿಶಿಷ್ಟ ರೀತಿಯಲ್ಲಿ, ಅರ್ಥಪೂರ್ಣವಾಗಿ ಆಚರಿಸಲಾಯಿತು.

ರಾಷ್ಟ್ರೀಯ ವಿಜ್ಞಾನ ದಿನದ ವಿಶೇಷ ಪ್ರತಿಜ್ಞಾವಿಧಿ ಮತ್ತು ರಾಷ್ಟ್ರೀಯ ವಿಜ್ಞಾನ ದಿನದ ಮಹತ್ವದ ಕುರಿತು ವಿಚಾರ ಮಂಡನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿಜ್ಞಾನಕ್ಕೆ ಸಂಬಂಧಪಟ್ಟ ವಿಶಿಷ್ಟವಾದ ರಂಗೋಲಿ, ಭಿತ್ತಿ ಪತ್ರಗಳನ್ನು ರಚಿಸಲಾಗಿತ್ತು. ವಿವಿಧ ತರಗತಿಯ ಮಕ್ಕಳಿಗೆ ವಿಜ್ಞಾನದ ಕುರಿತ ಪದಬಂಧ, ಚಿತ್ರಕಲಾ ಸ್ಪರ್ಧೆ, ವಿಜ್ಞಾನ ರಸಪ್ರಶ್ನೆ , ವಿಜ್ಞಾನ ಹಾಗೂ ಗಣಿತದ ಮಾದರಿಗಳ ತಯಾರಿಕೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಸಂಜೆಯ ಅಸೆಂಬ್ಲಿಯಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿಯವರಾದ ಶ್ರೀಮತಿ ಪರಿಮಳ ಎಮ್.ವಿ ಇವರು ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ಶಿಕ್ಷಕಿಯರಾದ ಶ್ರೀಮತಿ ಅನುಷಾ ಮತ್ತು ಶ್ರೀಮತಿ ಅಂಜು ರೂಪುಗೊಳಿಸಿದ ಕಾರ್ಯಕ್ರಮದಲ್ಲಿ ಎಲ್ಲ ವಿಜ್ಞಾನ ಹಾಗೂ ಗಣಿತ ಶಿಕ್ಷಕರು ಪಾಲ್ಗೊಂಡಿದ್ದರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ನಾಮಪತ್ರ ಸಲ್ಲಿಕೆ‌ ಕ್ಷಣಗಣನೆ

Suddi Udaya

ಬಳಂಜ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಶಿಶಿಲ ಗ್ರಾ.ಪಂ. ವತಿಯಿಂದ ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ದ.ಕ ಲೋಕಸಭಾ ಚುನಾವಣೆ: ವೀಕ್ಷಕರಾಗಿ ಹರೀಶ್ ಕುಮಾರ್ ನೇಮಕ

Suddi Udaya

ಪ್ರಸನ್ನ ಕಾಲೇಜ್ ಕ್ಯಾಂಪಸ್‌ನಲ್ಲಿ ಹೋಟೆಲ್ ಸಮಡೈನ್ ಶುಭಾರಂಭ ; ಮಾಜಿ ಸಚಿವ ಗಂಗಾಧರ ಗೌಡರಿಂದ ಉದ್ಘಾಟನೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ನೇತ್ರ ತಜ್ಞರಾಗಿ ಡಾ| ರಮೇಶ್ ನೇಮಕ

Suddi Udaya
error: Content is protected !!